Saturday, November 16, 2024

ಕುಮಾರಸ್ವಾಮಿ ಅಂಡ್ ಫ್ಯಾಮಿಲಿ ಕೇಸರಿ ಶಾಲು ಕಿತ್ತೆಸೆಯುವುದು ನಿಶ್ಚಿತ : ಸಿದ್ದರಾಮಯ್ಯ

ಬೆಂಗಳೂರು : ಲೋಕಸಭಾ ಚುನಾವಣೆ ಬಳಿಕ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅಂಡ್ ಫ್ಯಾಮಿಲಿ ಕೇಸರಿ ಶಾಲು ಕಿತ್ತೆಸೆಯುವುದು ನಿಶ್ಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಕಿದ್ದಾರೆ.

ಬೆಂಗಳೂರು ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್​ ಉಪಚುನಾವಣೆಯಲ್ಲಿ ಕಾಂಗ್ರೆಸ್​​ ಅಭ್ಯರ್ಥಿ ಪುಟ್ಟಣ್ಣ ಗೆಲುವು ಸಾಧಿಸಿದ್ದು, ಈ ಬಗ್ಗೆ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್‌ನ ಜಾತ್ಯತೀತ ಮುಖವಾಡ ಕಳಚಿದೆ. ಜೆಡಿಎಸ್‌ನ ಕೋಮುವಾದಿ ಅವತಾರಕ್ಕೆ ಮತದಾರ ಕಪಾಳಮೋಕ್ಷ ಮಾಡಿದ್ದಾನೆ. ಸ್ವಾರ್ಥ ಸಾಧನೆಯೊಂದೇ ಗುರಿಯಾಗಿರುವ ಈ ಅಪವಿತ್ರ ಮೈತ್ರಿಗೆ ‘ಗ್ಯಾರಂಟಿ, ವಾರೆಂಟಿ’ ಯಾವುದೂ ಇಲ್ಲ ಎಂದು ಛೇಡಿಸಿದ್ದಾರೆ.

JDS ಕೋಮುವಾದಿಗಳ ಜೊತೆ ಕೈಜೋಡಿಸಿದೆ

ಕುಟುಂಬದ ಹಿತಕ್ಕಾಗಿ‌ ಕೋಮುವಾದಿಗಳ ಜೊತೆ ಕೈಜೋಡಿಸಿರುವ ಜೆಡಿಎಸ್ ಪಕ್ಷವನ್ನು ಮತದಾರ ಬಂಧುಗಳ ಸಾರಾಸಗಟಾಗಿ ತಿರಸ್ಕರಿಸಿದ್ದಾರೆ. ಸದಾಕಾಲ ಕುಟುಂಬ ರಾಜಕಾರಣದ ವಿರುದ್ಧ ಟೀಕೆ ಮಾಡಿ, ಒಂದು ಕುಟುಂಬವೇ ರಾಜಕೀಯ ಪಕ್ಷದಂತಿರುವ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡ ಬಿಜೆಪಿಯನ್ನು ತಿರಸ್ಕರಿಸಿದ್ದಾರೆ ಎಂದು ಟೀಕಿಸಿದ್ದಾರೆ.

ಇದು ದೇವೇಗೌಡ-ಮೋದಿ ನಡುವಿನ ಮೈತ್ರಿ

ಬಿಜೆಪಿ, ಜೆಡಿಎಸ್ ಒಟ್ಟಾಗಿ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೂ ಸೋಲು ಕಂಡಿವೆ. ಇದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು, ಹೆಚ್.ಡಿ. ಕುಮಾರಸ್ವಾಮಿ, ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ನಡುವಿನ ಮೈತ್ರಿ ಅಷ್ಟೇ. 2 ಪಕ್ಷಗಳ ಮತದಾರರ ನಡುವಿನ ಮೈತ್ರಿಯಲ್ಲ ಎಂಬುದು ಸಾಬೀತಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

RELATED ARTICLES

Related Articles

TRENDING ARTICLES