ನವದೆಹಲಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆ ಕುರಿತ ಪೋಸ್ಟ್ ಗಳನ್ನು ಹಾಗೂ ಖಾತೆಗಳನ್ನು ನಿರ್ಬಂಧಿಸುವಂತೆ ಭಾರತ ಸರ್ಕಾರ ಎಲಾನ್ ಮಸ್ಕ್ ಒಡೆತನದ ಎಕ್ಸ್ ಸಂಸ್ಥೆಗೆ ಆದೇಶ ನೀಡಿದೆ. ಆದರೆ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಈ ಕ್ರಮವನ್ನು ಒಪ್ಪಿಕೊಳ್ಳುವುದಿಲ್ಲ ಎಂದು ಮಸ್ಟ್ ಒಡೆತನದ ಎಕ್ಸ್ ಪ್ರತಿಕ್ರಿಯೆ ನೀಡಿರುವುದಾಗಿ ವರದಿ ತಿಳಿಸಿದೆ.
ಮತ್ತೊಂದೆಡೆ ರೈತರ ಪ್ರತಿಭಟನೆಗೆ ಸಂಬಂಧಿಸಿದ ಪೋಸ್ಟ್ ಮತ್ತು ಖಾತೆಗಳನ್ನು ಭಾರತದಲ್ಲಿ ಮಾತ್ರ ನಿರ್ಬಂಧಿಸುವುದಾಗಿ ಎಕ್ಸ್ ಸಂಸ್ಥೆ ಸಮ್ಮತಿ ಸೂಚಿಸಿದೆ. ಆದರೆ ಎಕ್ಸ್ ಸಂಸ್ಥೆಯ ಆರೋಪದ ಬಗ್ಗೆ ಕೇಂದ್ರ ಸರ್ಕಾರ ಇನ್ನಷ್ಟೇ ಪ್ರತಿಕ್ರಿಯೆ ನೀಡಬೇಕಾಗಿದೆ.
ಇದನ್ನೂ ಓದಿ: ಕುಮಟಾ ಆಳ ಸಮುದ್ರದಲ್ಲಿ ಚೀನಾ ಬೋಟ್ ಪತ್ತೆ: ಗೂಢಚರ್ಯೆ ಅನುಮಾನ!