ಬೆಂಗಳೂರು : ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಭಾರತ ಭರ್ಜರಿ ಗೆಲುವು ಸಾಧಿಸಿದೆ. ಈ ಗೆಲುವಿನೊಂದಿಗೆ 3-1 ಅಂತರದಿಂದ ಭಾರತ ಸರಣಿಯನ್ನು ವಶಪಡಿಸಿಕೊಂಡಿದೆ.
192 ರನ್ಗಳ ಗುರಿಯನ್ನು ಬೆನ್ನತ್ತಿದ ಭಾರತ, 5 ವಿಕೆಟ್ಗಳ ಜಯ ದಾಖಲಿಸಿತು. ಪ್ರಥಮ ಇನ್ನಿಂಗ್ಸ್ನಲ್ಲಿ ಇಂಗ್ಲೆಂಡ್ 353 ರನ್ ಗಳಿಸಿದ್ದರೆ, ಭಾರತ 307 ರನ್ಗಳಿಗೆ ಆಲೌಟ್ ಆಗಿತ್ತು. ಎರಡನೇ ಇನ್ನಿಂಗ್ಸ್ನಲ್ಲಿ ಇಂಗ್ಲೆಂಡ್ 145 ರನ್ಗಳಿಗೆ ಆಲೌಟ್ ಆಗಿತ್ತು. ಈ ಮೂಲಕ ಭಾರತದ ಗೆಲುವಿಗೆ 192 ರನ್ಗಳ ಗುರಿಯನ್ನು ನೀಡಿತ್ತು.
ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಸರಣಿಯಲ್ಲಿ ಭಾರತ 3-1 ಮುನ್ನಡೆ ಸಾಧಿಸಿದ್ದು, ಇನ್ನೂ ಒಂದು ಪಂದ್ಯ ಇರುವಾಗಲೇ ಸರಣಿ ವಶಪಡಿಸಿಕೊಂಡಿದೆ. ಇದರೊಂದಿಗೆ ತವರು ನೆಲದಲ್ಲಿ ಭಾರತ ಸತತ 17ನೇ ಟೆಸ್ಟ್ ಸರಣಿ ಜಯಿಸಿದೆ.
2012ರಲ್ಲಿ ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ಭಾರತ ತವರಿನಲ್ಲಿ ಇಂಗ್ಲೆಂಡ್ ವಿರುದ್ಧ 1-2 ಅಂತರದಲ್ಲಿ ಸರಣಿ ಸೋತಿತ್ತು. ಇದಾದ ನಂತರ ಯಾವುದೇ ಸರಣಿ ಸೋತಿಲ್ಲ. ಆಸ್ಟ್ರೇಲಿಯಾ, ಶ್ರೀಲಂಕಾ, ನ್ಯೂಜಿಲೆಂಡ್, ಇಂಗ್ಲೆಂಡ್, ಬಾಂಗ್ಲಾದೇಶ, ದಕ್ಷಿಣ ಆಫ್ರಿಕಾ, ವೆಸ್ಟ್ ಇಂಡೀಸ್, ಅಫ್ಘಾನಿಸ್ತಾನ ವಿರುದ್ಧ ಭಾರತ ಸರಣಿ ಗೆದ್ದಿದೆ.
A fantastic victory in Ranchi for #TeamIndia 😎
India clinch the series 3⃣-1⃣ with the final Test to be played in Dharamsala 👏👏
Scorecard ▶️ https://t.co/FUbQ3MhXfH#INDvENG | @IDFCFIRSTBank pic.twitter.com/5I7rENrl5d
— BCCI (@BCCI) February 26, 2024