ಬೆಂಗಳೂರು: ಮಹಾಮಾರಿ ಕೊರೋನಾ ವಿರುದ್ಧ ದೇಶದ ಜನರನ್ನುಒಗ್ಗೂಡಿಸುವ ಸಲುವಾಗಿ ದೀಪ ಹಚ್ಚೋಣ ಎಂದು ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಕರೆ ಕೊಟ್ಟಿದ್ದಾರೆ. ಆದರೆ ಈ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅನುಮಾನ ವ್ಯಕ್ತಪಡಿಸಿದ್ದು, ಬಿಜೆಪಿ ಸಂಸ್ಥಾಪನಾ ದಿನವನ್ನು ಆಚರಿಸುತ್ತೆದೆಯಾ ಎಂದು ಪ್ರಶ್ನಿಸುತ್ತಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, 1980 ಎಪ್ರಿಲ್ 6 ರಂದು ಬಿಜೆಪಿಯ ಸಂಸ್ಥಾಪನಾ ದಿನ. ಬಿಜೆಪಿ ಸಂಸ್ತಾಪನೆಗೊಂಡು ಇಂದಿಗೆ 40 ವರ್ಷ ತುಂಬುತ್ತದೆ. ಹಾಗಾಗಿ ನರೇಂದ್ರ ಮೋದಿ ಈ ಕೊರೋನಾ ಸಂಕಷ್ಟವನ್ನು ಸಂಸ್ಥಾಪನಾ ದಿನ ಆಚರಿಸಲು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆಯೇ?‘ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.
ಈ ಕೊರೋನಾ ಸಂಕಷ್ಟದ ದಿನದಲ್ಲಿ ಬಿಜೆಪಿ ತನ್ನ ಸಂಸ್ಥಾಪನಾ ಸಂಭ್ರಮವನ್ನು ನೇರವಾಗಿ ಆಚರಿಸಲು ಹಿಂಜರಿದು, ದೇಶದ ಜನತೆಯ ಕೈಯಲ್ಲಿ ದೀಪ ಉರಿಸಿ ಆಚರಿಸಲು ಮುಂದಾಗಿರುವ ಬಿಜೆಪಿ ತನ್ನ ಭಂಡತನವನ್ನು ಮೆರೆಯುತ್ತಿದೆಯೇ ಎಂದು ಕುಮಾರಸ್ವಾಮಿ ಪ್ರಶ್ನಿಸುತ್ತಿದ್ದಾರೆ. ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲಿ ದೇಶದ ಸಂಕಟವನ್ನು ಬಗೆಹರಿಸುವ ಯಾವುದೇ ಮಾರ್ಗೋಪಾಯಗಳನ್ನು ದೇಶಕ್ಕೆ ಹೇಳದೇ ದೀಪ ಬೆಳಗಿಸುವ ಪ್ರಧಾನಿ ಕರೆ ಹಿಂದಿನ ವೈಜ್ಞಾನಿಕ ಕಾರಣ ಏನೆಂದು ಅವರೇ ಸ್ಪಷ್ಟಪಡಿಸಬೇಕು. ಈ ಕಷ್ಟದ ದಿನಗಳಲ್ಲಿ ದೀಪ ಬೆಳಗಿಸಿ ಒಗ್ಗಟ್ಟು ಪ್ರದರ್ಶಿಸುವ ನೆಪದಲ್ಲಿ ಇಂತಹ ತೋರಿಕೆಯ ಸಂಭ್ರಮ ಬೇಕೇ? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಬಿಜೆಪಿಯ ಸಂಸ್ಥಾಪನಾ ದಿನ ಆಚರಿಸಲು ಕೊರೋನ ಸಂಕಷ್ಟವನ್ನು ಪ್ರಧಾನಿ ದುರುಪಯೋಗ ಮಾಡಿಕೊಂಡರೇ?
6 ಎಪ್ರಿಲ್ 1980 ಬಿಜೆಪಿ ಸಂಸ್ಥಾಪನಾ ದಿನ. ಇಂದಿನ ದಿನ 5-04-2020ಕ್ಕೆ ಬಿಜೆಪಿಗೆ ನಲವತ್ತು ವರ್ಷ ತುಂಬುತ್ತವೆ.
1/4— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 5, 2020
ದೇಶದ ಸಂಕಟವನ್ನು ಬಗೆ ಹರಿಸುವ ಯಾವುದೇ ಮಾರ್ಗೋಪಾಯಗಳನ್ನು ದೇಶಕ್ಕೆ ಹೇಳದೇ ಪ್ರಧಾನಿ ಏಪ್ರಿಲ್ 5 ನ್ನೇ ಆಯ್ದುಕೊಂಡದ್ದಕ್ಕೆ ಬೇರೆ ಏನು ವೈಜ್ಞಾನಿಕ, ವೈಚಾರಿಕ ಕಾರಣ ಎಂಬುದನ್ನು ಸ್ಪಷ್ಟ ಪಡಿಸಬೇಕು.
ದೇಶ ಹಿಂದೆಂದೂ ಕಂಡರಿಯದ ಕಷ್ಟದ ದಿನಗಳಲ್ಲಿ ಇರುವಾಗ ದೀಪ ಬೆಳಗಿಸಿ ಒಗ್ಗಟ್ಟು ಪ್ರದರ್ಶಿಸುವ ನೆಪದಲ್ಲಿ ಈ ತರದ ತೋರಿಕೆಯ ಸಂಭ್ರಮ ಬೇಕೇ?
3/4— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 5, 2020
ಜಗತ್ತು ಕೊರೋನಾ ಮಹಾಮಾರಿಯಿಂದ ತತ್ತರಿಸುವ ಸಂದರ್ಭದಲ್ಲಿ ಇಂತಹ ರಹಸ್ಯ ಕಾರ್ಯಸೂಚಿ ಅರ್ಥಾತ್ ಪರದೆ ಹಿಂದಿನ ಸತ್ಯ ಮರೆಮಾಚಿ ಅಕಾಲಿಕ ದೀಪಾವಳಿ ಮಾಡಬೇಕೆ?
ಕರುಣಾಳು ಬಾ ಬೆಳಕೆ
ಮುಸುಕಿದೀ ಮಬ್ಬಿನಲಿ..
ಕೈ ಹಿಡಿದು
ನಡೆಸೆನ್ನನು…..4/4
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 5, 2020