Saturday, September 21, 2024

ಪಾಕ್ ಪರ ಘೋಷಣೆ.. ದೇಶದ್ರೋಹಿಗಳ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕು : ಯಡಿಯೂರಪ್ಪ ಆಗ್ರಹ

ಶಿವಮೊಗ್ಗ : ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ ದೇಶದ್ರೋಹಿಗಳ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಡಾ.ಬಿ.ಎಸ್. ಯಡಿಯೂರಪ್ಪ ಆಗ್ರಹಿಸಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಇದು ಅಕ್ಷಮ್ಯ ಅಪರಾಧ. ಈಗಾಗಲೇ ಪರಿಷತ್ ಹಾಗೂ ವಿಧಾನಸಭೆಯಲ್ಲಿ ಚರ್ಚೆ ನಡೆದಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ಇದರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಲೋಕಸಭಾ ಚುನಾವಣೆ ​​​​ ತಯಾರಿ ಕುರಿತು ಪ್ರತಿಕ್ರಿಯಿಸಿದ ಅವರು, ಜೆಡಿಎಸ್ ಜೊತೆ ಮೈತ್ರಿ ನಮಗೆ ದೊಡ್ಡ ಶಕ್ತಿ ತಂದು ಕೊಟ್ಟಂತಾಗಿದೆ. ಮುಂಬರುವ ದಿನಗಳಲ್ಲಿ ಜೆಡಿಎಸ್ ಮತ್ತು ಕುಮಾರಸ್ವಾಮಿಯವರ ಜೊತೆ ಒಟ್ಟಾಗಿ ಚುನಾವಣೆ ಎದುರಿಸಲು ಸಿದ್ಧತೆ ನಡೆದಿದೆ ಎಂದು ಹೇಳಿದ್ದಾರೆ.

28 ಸ್ಥಾನಗಳಲ್ಲಿ 25 ಸ್ಥಾನಗಳನ್ನು ಗೆಲ್ಲುತ್ತೇವೆ

ಇದಕ್ಕೆ ಪೂರಕವಾಗಿ ಶಾಸಕಿ ಶಾರದಾ ಪೂರ್ಯಾನಾಯ್ಕ್ ನಮ್ಮ ಜೊತೆ ಬಂದಿದ್ದಾರೆ. ಲೋಕಸಭೆ ಚುನಾವಣೆ ಎದುರಿಸಲು ಸಿದ್ಧತೆ ನಡೆದಿದೆ. 28 ಸ್ಥಾನಗಳಲ್ಲಿ 25 ಸ್ಥಾನಗಳನ್ನು ಗೆಲ್ಲುತ್ತೇವೆ. ಪ್ರಧಾನಿ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯಾಗಿಸುತ್ತೇವೆ ಎಂದು ಬಿ.ಎಸ್. ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

RELATED ARTICLES

Related Articles

TRENDING ARTICLES