Friday, September 20, 2024

44 ಕಾಂಗ್ರೆಸ್‌ ಕಾರ್ಯಕರ್ತರಿಗೆ ನಿಗಮ-ಮಂಡಳಿಗಳ ಅಧ್ಯಕ್ಷ ಸ್ಥಾನ

ಬೆಂಗಳೂರು: 44 ನಿಗಮ ಹಾಗೂ ಮಂಡಳಿಗಳಿಗೆ ಕಾಂಗ್ರೆಸ್‌ನ 44 ಮುಖಂಡರು ಹಾಗೂ ಕಾರ್ಯಕರ್ತರನ್ನು ಅಧ್ಯಕ್ಷರನ್ನಾಗಿ ನೇಮಿಸಿ ಸರ್ಕಾರ ಆದೇಶಿದಿದೆ.

ಜನವರಿ 26ರಂದೇ 34 ಮಂದಿ ಶಾಸಕರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡಿ ರಾಜ್ಯ ಸರ್ಕಾರ ಆದೇಶ ಮಾಡಿತ್ತು. ಆದರೆ, ನೇಮಕ ಮಾಡುವ ಪ್ರಕ್ರಿಯೆ ಆರಂಭವಾಗಿರಲಿಲ್ಲ.ಇದೀಗ, ಹೆಚ್ಚುವರಿಯಾಗಿ 10 ಮಂದಿ ಸೇರಿದಂತೆ 44 ಮಂದಿಯ ಪಟ್ಟಿಯನ್ನು ಸರ್ಕಾರ ಅಂತಿಮಗೊಳಿಸಿದೆ.

ಸಿದ್ದರಾಮಯ್ಯ ಅವರ ಆಪ್ತ ಕೆ. ಮರಿಗೌಡ ಸೇರಿದಂತೆ 44 ಮಂದಿಗೆ ಅಧ್ಯಕ್ಷ ಸ್ಥಾನ ಲಭಿಸಿದೆ. ಅಲ್ಲದೆ, ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ಮಾಜಿ ಸಚಿವ ಎಚ್.ಎಂ ರೇವಣ್ಣ ಅವರನ್ನು ನೇಮಕ ಮಾಡಲಾಗಿದೆ. ಅಲ್ಲದೆ, ಸಮಿತಿಗೆ ಉಪಾಧ್ಯಕ್ಷರಾಗಿ ಮೆಹರೂಜ್‌ ಖಾನ್‌, ಪುಷ್ಪಾ ಅಮರನಾಥ್‌, ಎಸ್.ಆರ್ ಪಾಟೀಲ ಮತ್ತು ಸೂರಜ್ ಹೆಗ್ಡೆ ಅವರನ್ನು ನೇಮಿಸಲಾಗಿದೆ.

RELATED ARTICLES

Related Articles

TRENDING ARTICLES