Thursday, September 19, 2024

‘ಕನಕಗಿರಿ ಅಭಿವೃದ್ಧಿ ಪ್ರಾಧಿಕಾರ’ ರಚನೆ ಮಾಡುತ್ತೇನೆ : ಸಿದ್ದರಾಮಯ್ಯ ಘೋಷಣೆ

ಕೊಪ್ಪಳ : ಮುಂದಿನ ವರ್ಷ ಕನಕಗಿರಿ ಅಭಿವೃದ್ಧಿ ಪ್ರಾಧಿಕಾರವನ್ನು ರಚನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಕೊಪ್ಪಳ ಜಿಲ್ಲೆಯ ಐತಿಹಾಸಿಕ ಕನಕಗಿರಿ ಉತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕೊಪ್ಪಳ ನನ್ನದೇ ಕ್ಷೇತ್ರ. ಈ ಜಿಲ್ಲೆಯ ಜನರ ಪ್ರೀತಿಗೆ ನಾನು ಸದಾ ಋಣಿ. ಕನಕಗಿರಿ ಉತ್ಸವವನ್ನು ನಿರಂತರವಾಗಿ ನಡೆಸಲು, ಕನಕಗಿರಿಯ ಸರ್ವತೋಮುಖ ಅಭಿವೃದ್ಧಿಗೆ ನಾನು ಮತ್ತು ನಮ್ಮ ಸರ್ಕಾರ ಸದಾ ಬದ್ಧವಾಗಿದೆ ಎಂದು ಹೇಳಿದರು.

ಶ್ರೇಷ್ಠತೆಯ ವ್ಯಸನದಿಂದ 58 ಲಕ್ಷ ಯಹೂದಿಗಳನ್ನು ಹತ್ಯೆ ಮಾಡಿದ ಹಿಟ್ಲರ್ ಕೊನೆಗೆ ಒಬ್ಬ ಹೇಡಿಯಂತೆ ಗುಂಡು ಹಾರಿಸಿಕೊಂಡು ಸತ್ತ. ಇಂಥಾ ಪರಿಸ್ಥಿತಿ ನಮ್ಮ ದೇಶದಲ್ಲಿ ಬರಬಾರದು. ಚತುರ್ವರ್ಣ ವ್ಯವಸ್ಥೆ ರೂಪಿಸಿ ಒಬ್ಬರನ್ನು ಶ್ರೇಷ್ಠರು ಉಳಿದವರನ್ನು ಕನಿಷ್ಠರು ಎನ್ನುವ ವ್ಯವಸ್ಥೆ ರೂಪಿಸಿದರು. ಇದನ್ನೇ ಹಿಟ್ಲರ್ ಮತ್ತು ಮುಸಲೋನಿ ಜರ್ಮನಿಯಲ್ಲಿ ಮಾಡಿದ್ದು. ಕೊನೆಗೆ ಅವರಿಗೆ ಯಾವ ಗತಿ ಆಯ್ತು ಎಂದು ಇಡಿ ಮನುಕುಲ ನೋಡಿದೆ ಎಂದು ತಿಳಿಸಿದರು.

ಬಸವ ಜಯಂತಿಯದೇ ನಾನು ಸಿಎಂ ಆದೆ

ಸಮಾಜದಲ್ಲಿ ಅಸಮಾನತೆ ಇದೆ. ಇದನ್ನು ಹೋಗಲಾಡಿಸಲು ಏನಾದ್ರೂ ಪ್ರಯತ್ನ ಮಾಡಿದ್ದೀವಾ ಎನ್ನುವ ಕುರಿತು ಪ್ರತಿಯೊಬ್ಬರೂ ತಮ್ಮನ್ನು ಪ್ರಶ್ನಿಸಿಕೊಳ್ಳಬೇಕು. ಈ ಚರಿತ್ರೆಯನ್ನು ನೆನಪಿಸುವುದಕ್ಕೇ ನಾನು ವಿಶ್ವವಿದ್ಯಾಲಯಕ್ಕೆ ಅಕ್ಕಮಹಾದೇವಿ ಅವರ ಹೆಸರು ಇಟ್ಟಿದ್ದು. ಬಸವ ಜಯಂತಿಯ ದಿನವೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದೆ. ನಮ್ಮ ಗ್ಯಾರಂಟಿ ಯೋಜನೆಗಳು ಕೂಡ ಬಸವೇಶ್ವರರ ಕಾಯಕ ದಾಸೋಹ ತತ್ವದ ಮೇಲೆ ರಚನೆಯಾದದ್ದು ಎಂದು ಸಿದ್ದರಾಮಯ್ಯ ಹೇಳಿದರು.

RELATED ARTICLES

Related Articles

TRENDING ARTICLES