Friday, September 20, 2024

ನೀರಿನ ಸಮಸ್ಯೆ ಎಷ್ಟಿದೆ ಅಂದ್ರೆ ಜನ ಶೌಚ ಮಾಡಲು ಮಾಲ್‌ಗೆ ಹೋಗ್ತಿದ್ದಾರೆ

ಬೆಂಗಳೂರು: ಟ್ಯಾಂಕಲ್ಲೂ ಇಲ್ಲ, ಸಂಪಲ್ಲೂ ಇಲ್ಲ, ಕುಡಿಯೋಕೂ ನೀರಿಲ್ಲ , ತೊಳೆಯೋಕೂ ನೀರಿಲ್ಲ, ಬೆಂಗಳೂರಿನಲ್ಲಿ ನೀರಿಲ್ಲಂದತ್ತಾಗಿದೆ.

ನೀರಿನ ಬಿಕ್ಕಟ್ಟಿನ ಮಧ್ಯೆ ಜನರು ಶೌಚಾಲಯಗಳನ್ನು ಬಳಸಲು ಹತ್ತಿರದ ಮಾಲ್‌ಗಳಿಗೆ ಹೋಗುತ್ತಿದ್ದಾರೆ.ಇನ್ನೂ ಜನರು ಸ್ನಾನ ಮಾಡಲು ಜಿಮ್‌ಗಳಿಗೆ ಹೋಗುತ್ತಿದ್ದಾರೆ ಎಂದು ಮತ್ತೋರ್ವ ವ್ಯಕ್ತಿ ಹೇಳಿರುವುದಾಗಿ ವರದಿ ಆಗಿದೆ.

ನಾವು ಎಲ್ಲಿಗೆ ಬಂದಿದ್ದೇವೆ? ಇದಕ್ಕೆ ನಿಮ್ಮ ದೀರ್ಘಾವಧಿಯ ಪರಿಹಾರವೇನು? ಸೂಕ್ತ ನೀರಿಲ್ಲದ ಫ್ಲಾಟ್​ಗಳ ಖರೀದಿಸುವುದನ್ನು ನಿಲ್ಲಿಸಿ ಎಂದು ನಿವಾಸಿಗಳು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್​ಗೆ ಮನವಿ ಮಾಡಿದ್ದಾರೆ.

ಪ್ರೆಸ್ಟೀಜ್ ಫಾಲ್ಕನ್ ಸಿಟಿಯ ಜನರು 1 ಕೋಟಿ ರೂ. ಇಎಂಐ ಪಾವತಿಸುತ್ತಿದ್ದಾರೆ. ಆದರೆ ಶೌಚಾಲಯದಲ್ಲಿ ಫ್ಲಶ್ ಮಾಡಲು ಸಾಧ್ಯವಾಗುತ್ತಿಲ್ಲ ಎಂದರು.

ಹೆಚ್ಚಿನ ಬಾಡಿಗೆದಾರರು ಮನೆ ಖಾಲಿ ಮಾಡಿದ್ದರೆ, ಇತರರು ತಾತ್ಕಾಲಿಕ ವಸತಿಗಳಿಗೆ ತೆರಳಿದ್ದಾರೆ. ನೀರಿಲ್ಲದ ಪರಿಣಾಮ ಶೌಚಾಲಯಗಳು ಸ್ವಚ್ಚಗೊಳಿಸದಿರುವುದರಿಂದ ಗಬ್ಬು ವಾಸನೆ ಬರುತ್ತಿವೆ. ಹೀಗಾಗಿ ಜನರು ತಮ್ಮ ನಿತ್ಯಕರ್ಮಗಳನ್ನು ಮಾಡಲು ಹತ್ತಿರದ ಮಾಲ್‌ಗೆ ಹೋಗುತ್ತಿರುವುದು ಸಾಮಾನ್ಯವಾಗಿದೆ ಎಂದು ನಿವಾಸಿಯೊಬ್ಬರು ಪೋಸ್ಟ್ ಹಂಚಿಕೊಂಡಿದ್ದಾರೆ.

ಇನ್ನು ಕೆಲ ಜನರು ಬಟ್ಟೆ ಮತ್ತು ಟವೆಲ್ ಜೊತೆಗೆ ಜಿಮ್‌ಗಳಿಗೆ ತೆರಳುತ್ತಿದ್ದು, ಇಲ್ಲಿಯೇ ಸ್ನಾನ ಮಾಡಿ ಬರುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ನಗರದಲ್ಲಿ ಟ್ಯಾಂಕರ್ ನೀರಿನ ಮೇಲೆ ಅವಲಂಬಿತವಾಗಿರುವ ಫ್ಲಾಟ್‌ಗಳನ್ನು ಖರೀದಿಸದಂತೆ ಫ್ಲಾಟ್‌ ನಿವಾಸಿಗಳು ಜನರಿಗೆ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನೀರಿಗಾಗಿ ಹಾಹಾಕಾರ ಎದ್ದಿದೆ.

 

RELATED ARTICLES

Related Articles

TRENDING ARTICLES