ಬೆಂಗಳೂರು : ಧರ್ಮಶಾಲಾದಲ್ಲಿ ನಡೆದ ಅಂತಿಮ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧದ ಭಾರತ ಭರ್ಜರಿ ಜಯಭೇರಿ ಬಾರಿಸಿತು. ಈ ಗೆಲುವಿನೊಂದಿಗೆ 5 ಪಂದ್ಯಗಳ ಸರಣಿಯನ್ನು ಭಾರತ 4-1 ಅಂತರದಿಂದ ಗೆದ್ದು ಬೀಗಿತು.
ಸರಣಿಯ ಮೊದಲ ಪಂದ್ಯದಲ್ಲಿ ಗೆಲುವಿನ ನಗೆ ಬೀರಿದ್ದ ಇಂಗ್ಲೆಂಡ್, ಉಳಿದ ನಾಲ್ಕು ಪಂದ್ಯಗಳಲ್ಲಿ ಹೀನಾಯ ಸೋಲು ಕಂಡಿತು. ಅಂತಿಮ ಟೆಸ್ಟ್ನಲ್ಲಿ ಇಂಗ್ಲೆಂಡ್ 64 ರನ್ ಹಾಗೂ ಇನ್ನಿಂಗ್ಸ್ ಸೋಲು ಅನುಭವಿಸಿತು.
ಇಂಗ್ಲೆಂಡ್ ಮೊದಲ ಇನ್ನಿಂಗ್ಸ್ನಲ್ಲಿ 218 ರನ್ಗಳಿಗೆ ಆಲೌಟ್ ಆಗಿತ್ತು. ಇದಕ್ಕೆ ಉತ್ತರವಾಗಿ ಭಾರತ 477 ರನ್ ಗಳಿಸಿತ್ತು. 259 ರನ್ಗಳ ಹಿನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ರವಿಚಂದ್ರನ್ ಅಶ್ವಿನ್ ಸ್ಪಿನ್ ಮೋಡಿಗೆ ಧೂಳಿಪಟವಾಯಿತು. 195 ರನ್ಗಳಿಗೆ ಇಂಗ್ಲೆಂಡ್ ಆಲೌಟ್ ಆಯಿತು. ಭಾರತದ ಪರ ಆರ್. ಅಶ್ವಿನ್ 5, ಬುಮ್ರಾ ಹಾಗೂ ಕುಲ್ದೀಪ್ ಯಾದವ್ ತಲಾ 2 ಹಾಗೂ ಜಡೇಜಾ 1 ವಿಕೆಟ್ ಪಡೆದು ಮಿಂಚಿದರು.
ಟೆಸ್ಟ್ ಕ್ರಿಕೆಟ್ನಲ್ಲಿ 3 ಬಾರಿ ಈ ವಿಶೇಷ ದಾಖಲೆ
ಆಂಗ್ಲರನ್ನು ಬಗ್ಗುಬಡಿದ ಭಾರತ ಟೆಸ್ಟ್ ಕ್ರಿಕೆಟ್ನಲ್ಲಿ ಐತಿಹಾಸಿಕ ದಾಖಲೆ ನಿರ್ಮಿಸಿತು. ಟೆಸ್ಟ್ನಲ್ಲಿ ಮೊದಲ ಪಂದ್ಯ ಸೋತು, ಬಳಿಕ 4-1 ಅಂತರದಿಂದ ಸರಣಿ ಗೆದ್ದ ವಿಶೇಷ ದಾಖಲೆ ಬರೆಯಿತು. ಟೆಸ್ಟ್ ಕ್ರಿಕೆಟ್ನಲ್ಲಿ ಈವರೆಗೆ 3 ಬಾರಿ ಈ ರೀತಿಯ ವಿಶೇಷ ದಾಖಲೆ ನಿರ್ಮಾಣವಾಗಿದೆ.
112 ವರ್ಷಗಳ ಬಳಿಕ ಇತಿಹಾಸ ಬರೆದ ಭಾರತ
1897-98 ಮತ್ತು 1901-02 ರಲ್ಲಿ ಇಂಗ್ಲೆಂಡ್ ವಿರುದ್ಧ ಆಸ್ಟ್ರೇಲಿಯಾ 4-1 ಅಂತರದಿಂದ 2 ಬಾರಿ ಸರಣಿ ಗೆದ್ದಿತ್ತು. 1912 ರಲ್ಲಿ ಇಂಗ್ಲೆಂಡ್ ತಂಡ ಈ ಸಾಧನೆ ಮಾಡಿತ್ತು. ಇದೀಗ 112 ವರ್ಷಗಳ ಬಳಿಕ ಭಾರತ 4-1 ಅಂತರದಿಂದ ಇಂಗ್ಲೆಂಡ್ ತಂಡವನ್ನು ಮಣಿಸಿ ಐತಿಹಾಸಿಕ ಗೆಲುವು ದಾಖಲಿಸಿದೆ. ಈ ಮೂಲಕ ಮೊದಲ ಪಂದ್ಯವನ್ನು ಸೋತು 4-1 ಅಂತರದಿಂದ ಸರಣಿ ಗೆದ್ದ ವಿಶ್ವದ ಮೂರನೇ ತಂಡ ಎಂಬ ಶ್ರೇಯಕ್ಕೆ ಪಾತ್ರವಾಯಿತು.
That series winning feeling 😃#TeamIndia 🇮🇳 complete a 4⃣-1⃣ series victory with a remarkable win 👏👏
Scorecard ▶️ https://t.co/OwZ4YNua1o#INDvENG | @IDFCFIRSTBank pic.twitter.com/vkfQz5A2hy
— BCCI (@BCCI) March 9, 2024