Friday, September 20, 2024

ದೆಹಲಿ ಮದ್ಯ ಹಗರಣ ಕೇಸ್​: ತೆಲಂಗಾಣ ಮಾಜಿ ಸಿಎಂ ಕೆಸಿಆರ್‌ ಪುತ್ರಿ ಕವಿತಾ ಅರೆಸ್ಟ್‌

ತೆಲಂಗಾಣ: ದೆಹಲಿ ಮದ್ಯ ಹಗರಣ ಪ್ರಕರಣದ ಹಿನ್ನೆಲೆ ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್‌ ರಾವ್‌ ಅವರ ಪುತ್ರಿ ಹಾಗೂ ಬಿಆರ್‌ಎಸ್‌ ಪಕ್ಷದ ಎಂಎಲ್‌ಸಿ ಕವಿತಾ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ.

ಇಂದು ಕವಿತಾ ಅವರ ಹೈದರಾಬಾದ್‌ ನಿವಾಸದ ಮೇಲೆ ಇಡಿ ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸಿತ್ತು. ಈ ವೇಳೆ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದ ಇಡಿ ಅಧಿಕಾರಿಗಳು ಸಂಜೆ ವೇಳೆ ವಿಧಾನ ಪರಿಷತ್‌ ಸದಸ್ಯೆಯಾಗಿರುವ  ಕವಿತಾ ಅವರನ್ನು ಬಂಧಿಸಿದ್ದಾರೆ.

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಎಎಪಿ ನಾಯಕ ವಿಜಯ್ ನಾಯರ್ ಅವರು ಕೆಲವು ಉದ್ಯಮಿಗಳು ಮತ್ತು ರಾಜಕಾರಣಿಗಳ ನಿಯಂತ್ರಣದಲ್ಲಿರುವ ‘ದಕ್ಷಿಣ ಗುಂಪಿನಿಂದ’ 100 ಕೋಟಿ ರೂಪಾಯಿಗಳನ್ನು ಕಿಕ್‌ಬ್ಯಾಕ್ ಪಡೆದಿದ್ದಾರೆ ಎಂಬ ಆರೋಪವಿದೆ. ಕವಿತಾ ಅವರು 100 ಕೋಟಿ ರೂಪಾಯಿ ಕಿಕ್‌ಬ್ಯಾಕ್ ಪಾವತಿಸಿದ ಮದ್ಯದ ಕಾರ್ಟೆಲ್ ‘ದಿ ಸೌತ್ ಗ್ರೂಪ್’ ನ ಭಾಗವಾಗಿದ್ದರು ಎಂದು ಇಡಿ ಆರೋಪಿಸಿದೆ.

ಕೆ.ಕವಿತಾ ಅಮಿತ್ ಅರೋರಾ ಅವರೊಂದಿಗೆ ಸಂವಹನ ನಡೆಸಲು ಫ್ಯಾನ್ಸಿ ನಂಬರ್‌ಗಳನ್ನು ಬಳಸಿದ್ದಾರೆ. ಪೈಕಿ ಎರಡು ಸಿಮ್‌ಗಳನ್ನು ಹೆಚ್ಚು ಬಳಸಿದ್ದು, ಈ ಬಗ್ಗೆ ಸಂಭಾಷಣೆ ನಡೆಸಲು ಅವರು ಹತ್ತಕ್ಕೂ ಹೆಚ್ಚು ಬಾರಿ IMEI ಅನ್ನು ಬದಲಾಯಿಸಿದ್ದಾರೆ. ತನಿಖೆ ವೇಳೆ ಫೋನ್‌ಗಳನ್ನು ಪರಿಶೀಲಿಸಿದಾಗ ಫೋನ್‌ಗಳಲ್ಲಿ ಡೇಟಾವನ್ನು ಅಳಿಸಿ ಹಾಕಲಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಲಾಗಿತ್ತು.

RELATED ARTICLES

Related Articles

TRENDING ARTICLES