ಬೆಂಗಳೂರು : ಇಂದು ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ಮಹಿಳಾ ಪ್ರೀಮಿಯರ್ ಲೀಗ್ ಫೈನಲ್ ಪಂದ್ಯ ನಡೆಯಲಿದೆ. ಈ ಪಂದ್ಯದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಸೆಣಸಲಿವೆ.
ಡೆಲ್ಲಿ ಕ್ಯಾಪಿಟಲ್ಸ್ ಸತತ ಎರಡನೇ ಬಾರಿ ಫೈನಲ್ ತಲುಪಿದರೆ, ಆರ್ಸಿಬಿ ಮೊದಲ ಬಾರಿಗೆ ಫೈನಲ್ ಪ್ರವೇಶಿಸಿದೆ. ಬಲಾಬಲದಲ್ಲಿ ಎರಡೂ ತಂಡಗಳು ಸಮಬಲ ಹೊಂದಿದ್ದು, ಫೈನಲ್ ಫೈಟ್ ರೋಚಕವಾಗಿರಲಿದೆ.
ಆರ್ಸಿಬಿ ಹಾಗೂ ಡೆಲ್ಲಿ ಪುರುಷ ಹಾಗೂ ಮಹಿಳೆಯರ ತಂಡ ಐಪಿಎಲ್ನಲ್ಲಿ ಈವರೆಗೆ ಒಂದೇ ಒಂದು ಪ್ರಶಸ್ತಿ ಗೆದ್ದಿಲ್ಲ. ಈ ಉಭಯ ತಂಡಗಳು ಇಂದು ಮೊದಲ ಬಾರಿಗೆ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಳ್ಳಲು ಮುಖಾಮುಖಿಯಾಗಲಿವೆ.
WPL ಎರಡನೇ ಸೀಸನ್ನ ಆರಂಭದಿಂದಲೂ ಡೆಲ್ಲಿ ಗೆಲುವಿನ ನಗೆ ಬೀರುತ್ತಾ ಬಂದಿದೆ. ಗುಜರಾತ್ ತಂಡವನ್ನು ಮಣಿಸಿ ಮೊದಲ ತಂಡವಾಗಿ ಫೈನಲ್ ಪ್ರವೇಶಿಸಿತು. ಆರ್ಸಿವಿ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್ ಮುಂಬೈ ತಂಡವನ್ನು ಸೋಲಿಸಿ ಫೈನಲ್ಗೆ ಲಗ್ಗೆ ಇಟ್ಟಿದೆ.
ಪಂದ್ಯ ಆರಂಭ : ರಾತ್ರಿ 7.30
ಕ್ರೀಡಾಂಗಣ : ಅರುಣ್ ಜೇಟ್ಲಿ ಕ್ರೀಡಾಂಗಣ, ದೆಹಲಿ
ಆರ್ಸಿಬಿ ತಂಡ
ಸ್ಮೃತಿ ಮಂಧಾನ (ನಾಯಕಿ), ಆಶಾ ಶೋಬನಾ, ದಿಶಾ ಕಸತ್, ಎಲ್ಲಿಸ್ ಪೆರ್ರಿ, ಹೀದರ್ ನೈಟ್, ಇಂದ್ರಾಣಿ ರಾಯ್, ರೇಣುಕಾ ಸಿಂಗ್, ರಿಚಾ ಘೋಷ್, ಶ್ರೇಯಾಂಕಾ ಪಾಟೀಲ್, ಸೋಫಿ ಡಿವೈನ್*, ಜಾರ್ಜಿಯಾ ವೇರ್ಹ್ಯಾಮ್, ಏಕ್ತಾ ಬಿಶ್ತ್, ಕೇಟ್ ಕ್ರಾಸ್, ಶುಭಾ ಸತೀಶ್, ಸಿಮ್ರಾನ್ ಬಹದ್ದೂರ್, ಸಬ್ಬಿನೇನಿ ಮೇಘನಾ, ಸೋಫಿ ಮೊಲಿನಕ್ಸ್.
ಡೆಲ್ಲಿ ಕ್ಯಾಪಿಟಲ್ಸ್ ತಂಡ
ಮೆಗ್ ಲ್ಯಾನಿಂಗ್ (ನಾಯಕಿ), ಆಲಿಸ್ ಕ್ಯಾಪ್ಸೆ, ಅರುಂಧತಿ ರೆಡ್ಡಿ, ಜೆಮಿಮಾ ರೊಡ್ರಿಗಸ್, ಜೆಸ್ ಜೊನಾಸೆನ್, ಲಾರಾ ಹ್ಯಾರಿಸ್, ಮರಿಜಾನ್ನೆ ಕಪ್, ಮಿನ್ನು ಮಣಿ, ಪೂನಂ ಯಾದವ್, ರಾಧಾ ಯಾದವ್, ಶಫಾಲಿ ವರ್ಮಾ, ಶಿಖಾ ಪಾಂಡೆ, ಸ್ನೇಹಾ ದೀಪ್ತಿ, ತಾನಿಯಾ, ಟಿಟಾಸ್ ಸಾಧು, ಅನ್ನಾಬೆಲ್ ಸದರ್ಲ್ಯಾಂಡ್, ಅಪರ್ಣಾ ಮೊಂಡಲ್, ಅಶ್ವನಿ ಕುಮಾರಿ.