Friday, September 20, 2024

ಸ್ಪರ್ಧೆ ಮಾಡಿ ಎಂದು ಆರತಿ ಮಾಡಿ ಕರೆದುಕೊಂಡು ಬಂದು ಮಂಗಳಾರತಿ ಮಾಡಿ ಕಳಿಸಿದ್ದಾರೆ: ಸದಾನಂದಗೌಡ

ಬೆಂಗಳೂರು : ಸ್ಫರ್ಧೆ ಮಾಡಿ ಅಂತಾ ನನ್ನ ಆರತಿ ಮಾಡಿ ಕರೆದುಕೊಂಡು ಬಂದು ಮಂಗಳಾರತಿ ಮಾಡಿ ಹೊರಗೆ ಕಳುಹಿಸಿದ್ದಾರೆ ಎಂದು ಹೇಳುವ ಮೂಲಕ ಪರೋಕ್ಷವಾಗಿ ವಿಪಕ್ಷ ನಾಯಕ ಆರ್.ಅಶೋಕ್ ಮತ್ತು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಡಿವಿ ಸಧಾನಂದ ಗೌಡ ಅವರು ಗುಡುಗಿದ್ದಾರೆ. ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಟಿಕೆಟ್​ ಕೈತಪ್ಪಿದ ಹಿನ್ನೆಲೆ ಅಸಮಧಾನ ಹೊರಹಾಕಿದ್ದಾರೆ.

ಇಂದು ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ಎನ್​ಡಿಎಗೆ ಜೆಡಿಎಸ್ ಸೇರ್ಪಡೆ ಆಗಿರುವುದನ್ನು ಸ್ವಾಗತಿಸುತ್ತೇನೆ. ಆದರೆ ಈ ಸಂದರ್ಭದಲ್ಲಿ ಪಕ್ಷಕ್ಕೆ ಜೀವ ತೇಯ್ದವರನ್ನು ಕಡೆಗಣಿಸಬಾರದು ಎಂದು ಹೇಳಿರುವ ಸದಾನಂದಗೌಡ, ನನ್ನ ಎಲ್ಲಾ ಮಾತುಗಳೂ ಕರ್ನಾಟಕ ಬಿಜೆಪಿಗೆ ಸೀಮಿತವಾಗಿದೆ. ನಾನೊಬ್ಬ ಕನ್ನಡಿಗನಾಗಿ ಮಾತಾಡುತ್ತಿದ್ದೇನೆ. ಬಿಜೆಪಿ ಶುದ್ದೀಕರಣ ಮಾಡುವವರೆಗೆ ನಾನು ವಿರಮಿಸುವುದಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿಗೆ ಗುಡ್‌ಬೈ ಹೇಳಿದ ಸಂಸದ ಬಿ.ಎನ್.ಬಚ್ಚೇಗೌಡ!

ಸ್ಫರ್ಧೆ ಮಾಡಿ ಅಂತಾ ನನ್ನ ಆರತಿ ಮಾಡಿ ಕರೆದುಕೊಂಡು ಬಂದು ಮಂಗಳಾರತಿ ಮಾಡಿ ಹೊರಗೆ ಕಳುಹಿಸಿದ್ದಾರೆ. ಚುನಾವಣೆ ಬಳಿಕ ಶುದ್ದೀಕರಣಕ್ಕೆ ವೇಗ ಕೊಡುತ್ತೇನೆ. ಸಮಾನ ಮನಸ್ಕರ ಸಭೆ ಕರೆಯುತ್ತೇನೆ ಎಂದು ಸದಾನಂದಗೌಡ ಹೇಳಿದ್ದಾರೆ. ಪಕ್ಷ ಶುದ್ಧೀಕರಣ ಒಬ್ಬನಿಂದ ಆಗುವ ಕೆಲಸವಲ್ಲ. ಪಕ್ಷದ ಜವಾಬ್ದಾರಿ ವಹಿಸಿಕೊಂಡವರು ಸ್ವಾರ್ಥಿಗಳು. ನಮ್ಮ ಮನೆಯವರಿಗೆ, ಸಂಬಂಧಿಗಳಿಗೆ, ಚೇಲಾಗಳಿಗೆ. ಎಲ್ಲವೂ ನಮಗೇ ಸಿಗಬೇಕು ಎಂದು ಸ್ವಾರ್ಥಿಗಳಾಗಿದ್ದಾರೆ. ಕಾರ್ಯಕರ್ತರಿಗೆ ಯಾವುದೇ ಅವಕಾಶ ಕೊಡುತ್ತಿಲ್ಲ ಎಂದು ಹೇಳುವ ಮೂಲಕ ಯಡಿಯೂರಪ್ಪ ವಿರುದ್ಧ ಸದಾನಂದಗೌಡ ಆಕ್ರೋಶ ಹೊರಹಾಕಿದರು.

ನನಗೆ ಬಿಜೆಪಿ ಟಿಕೆಟ್​​ ತಪ್ಪಿದ್ದಕ್ಕೆ ನನಗೆ ನೋವಾಗಿದೆ. ನನಗೆ ಕಾಂಗ್ರೆಸ್​ನಿಂದ ಆಹ್ವಾನ ಬಂದಿರುವುದು ಸತ್ಯ ಎಂದು ಸದಾನಂದಗೌಡ ಹೇಳಿದರು. ಪಕ್ಷ ಶುದ್ಧೀಕರಣ ನನ್ನ ಮುಖ್ಯ ಉದ್ದೇಶ. ಮುಂದಿನ ದಿನಗಳಲ್ಲಿ ಅವರು ಪಶ್ಚಾತ್ತಾಪ ಪಡುತ್ತಾರೆ. ಮುಂದಿನ ನಡೆ ಏನು ಎಂದು ಹಲವರು ಕೇಳಿದ್ದಾರೆ. ನನ್ನ ಮುಂದಿನ ನಡೆ ಪಕ್ಷ ಶುದ್ಧೀಕರಣ. ಬಿಜೆಪಿ ತೊರೆಯುವುದಿಲ್ಲ, ಕಾಂಗ್ರೆಸ್ ಸೇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

RELATED ARTICLES

Related Articles

TRENDING ARTICLES