ಬೆಂಗಳೂರು : ಲೋಕಸಭಾ ಚುನಾವಣೆ ಇನ್ನು ಕೆಲವೇ ದಿನಗಳು ಬಾಕಿ ಇರುವಾಗ ಜೆಡಿಎಸ್ ರಾಜಿನಾಮೆ ನೀಡುವ ಮೂಲಕ ಪರಿಷತ್ ಸದಸ್ಯ ಮರಿತಿಬ್ಬೇ ಗೌಡ ಅವರು ಇಂದು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಇಂದು ಜೆಡಿಎಸ್ ಮತ್ತು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡರು.
ಇದನ್ನೂ ಓದಿ: ಸೋನು ಶ್ರೀನಿವಾಸ್ ಗೌಡ ಬಂಧನ: ಡಿಸಿಪಿ ಗಿರೀಶ್ ಪ್ರತಿಕ್ರಿಯೆ!
ಬಿಜೆಪಿ ಜತೆ ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಿದ್ದರಿಂದ ಆಕ್ರೋಶಗೊಂಡು ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿ ಜೆಡಿಎಸ್ ತೊರೆದ ಮರಿತಿಬ್ಬೇಗೌಡ ಅವರು ತಮ್ಮ ಅಪಾರ ಅಭಿಮಾನಿಗಳ ಜತೆ ಇಂದು ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಮಂಡ್ಯ ಜಿಲ್ಲೆಯ ಜೆಡಿಎಸ್ ಕಾರ್ಯಕರ್ತರ ಜತೆಗೆ ಮಳವಳ್ಳಿ, ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರಗಳ ಜೆಡಿಎಸ್ ಮತ್ತು ನಾನಾ ಮೋರ್ಚಾಗಳ ಕಾರ್ತಕರ್ತರನ್ನು ಕಾಂಗ್ರೆಸ್ ಗೆ ಬರಮಾಡಿಕೊಳ್ಳಲಾಯಿತು.