ಬೆಂಗಳೂರು : ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಟಾಸ್ ಗೆದ್ದಿರುವ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು.
ಜೈಪುರದ ಸವಾಯಿ ಮಾನ್ಸಿಂಗ್ ಸ್ಟೇಡಿಯಂನಲ್ಲಿ ಐಪಿಎಲ್ 17ನೇ ಆವೃತ್ತಿಯ 4ನೇ ಪಂದ್ಯ ನಡೆಯುತ್ತಿದೆ. ಉಭಯ ತಂಡಗಳು ಈವರೆಗೆ 3 ಬಾರಿ ಮುಖಾಮುಖಿಯಾಗಿವೆ. ಈ ಪೈಕಿ ರಾಜಸ್ಥಾನ ರಾಯಲ್ಸ್ 2 ಪಂದ್ಯ ಹಾಗೂ ಲಕ್ನೋ ಸೂಪರ್ ಜೈಂಟ್ಸ್ 1 ಪಂದ್ಯ ಗೆದ್ದಿದೆ.
ಇಂದು ಎರಡು ಪಂದ್ಯಗಳು ನಡೆಯಲಿವೆ. ಮೊದಲ ಪಂದ್ಯ ರಾಜಸ್ಥಾನ ರಾಯಲ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ನಡುವೆ ಮಧ್ಯಾಹ್ನ 3.30ರಿಂದ ಆರಂಭವಾಗಲಿದೆ. ಎರಡನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಗುಜರಾತ್ ಟೈಟಾನ್ಸ್ ಕಾದಾಡಲಿವೆ. ಅಹಮದಾಬಾದ್ನಲ್ಲಿ ರಾತ್ರಿ 7.30ಕ್ಕೆ ಪಂದ್ಯ ಆರಂಭವಾಗಲಿದೆ.
ರಾಜಸ್ಥಾನ್ ರಾಯಲ್ಸ್
ಸಂಜು ಸ್ಯಾಮ್ಸನ್(ನಾಯಕ/ವಿಕೆಟ್ ಕೀಪರ್), ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ರಿಯಾನ್ ಪರಾಗ್, ಶಿಮ್ರಾನ್ ಹೆಟ್ಮೆಯರ್, ಧ್ರುವ್ ಜುರೆಲ್, ರವಿಚಂದ್ರನ್ ಅಶ್ವಿನ್, ಸಂದೀಪ್ ಶರ್ಮಾ, ಅವೇಶ್ ಖಾನ್, ಟ್ರೆಂಟ್ ಬೌಲ್ಟ್, ಯುಜ್ವೇಂದ್ರ ಚಹಾಲ್
ಲಕ್ನೋ ಸೂಪರ್ ಜೈಂಟ್ಸ್
ಕೆ.ಎಲ್. ರಾಹುಲ್ (ನಾಯಕ), ಕ್ವಿಂಟನ್ ಡಿ ಕಾಕ್(ವಿಕೆಟ್ ಕೀಪರ್), ದೇವದತ್ ಪಡಿಕ್ಕಲ್, ಆಯುಷ್ ಬಡೋನಿ, ಮಾರ್ಕಸ್ ಸ್ಟೋನಿಸ್, ನಿಕೋಲಸ್ ಪೂರನ್, ಕೃನಾಲ್ ಪಾಂಡ್ಯ, ರವಿ ಬಿಷ್ಣೋಯ್, ಮೊಹ್ಸಿನ್ ಖಾನ್, ನವೀನ್-ಉಲ್-ಹಕ್, ಯಶ್ ಠಾಕೂರ್