Friday, September 20, 2024

ಕೆಎಎಸ್​ ಪರೀಕ್ಷಾ ದಿನಾಂಕ ಮುಂದೂಡಿಕೆ: ಸಂಪೂರ್ಣ ಮಾಹಿತಿ ಇಲ್ಲಿದೆ

ಬೆಂಗಳೂರು : ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಮಹತ್ವದ ಮಾಹಿತಿಯೊಂದನ್ನು ಹೊರಡಿಸಿದೆ. ಈಗಾಗಲೇ ಪರೀಕ್ಷೆ ನಡೆಸಲು ನಿಗಧಿಪಡಿಸಿದ್ದ ದಿನಾಂಕವನ್ನು ಮುಂದೂಡಿ ಆದೇಶ ಹೊರಡಿಸಿದೆ.

ಇದನ್ನೂ ಓದಿ: ಖೇಲೋ ಇಂಡಿಯಾ ರಾಜ್ಯ ಉತ್ಕೃಷ್ಟತಾ ಕೇಂದ್ರಕ್ಕೆ ಆಯ್ಕೆ: ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

ರಾಜ್ಯ ಸರ್ಕಾರ 2023-24ನೇ ಸಾಲಿನಲ್ಲಿ 384 ಗ್ರೂಪ್-ಎ ಮತ್ತು ಗ್ರೂಪ್​- ಬಿ ಪ್ರೊಬೇಷನರಿ ಹುದ್ದೆಗಳಿಗೆ ಫೆಬ್ರವರಿ 26 ರಂದು ಅಧಿಸೂಚನೆಯನ್ನು ಹೊರಡಿಸಿತ್ತು. ಮಾರ್ಚ್​ 4 ರಿಂದ ಏಪ್ರಿಲ್​ 3ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಿತ್ತು, ಮತ್ತು ಪೂರ್ವಭಾವಿ ಪರೀಕ್ಷೆಯನ್ನು ಮೇ5 ರಂದು ನಡೆಸಲು ತೀರ್ಮಾನಿಸಿತ್ತು ಆದರೇ ಈ ಆದೇಶವನ್ನು ಪರಿಷ್ಕರಿಸಿ ಹೊಸ ಪ್ರಕಟಣೆಯನ್ನು ಹೊರಡಿಸಿದೆ.

ಇದೀಗ ಗೆಜೆಟೆಡ್​ ಪ್ರೊಬೇಷನರಿ ಹುದ್ದೆಗಳಿಗೆ ಸಂಬಂಧಿಸಿ ಪ್ರಕಟಣೆಯೊಂದನ್ನು ಹೊರಡಿಸಿರುವ ಲೋಕಸೇವಾ ಆಯೋಗ ಪರೀಕ್ಷಾ ದಿನಾಂಕವನ್ನು ಮುಂದೂಡಿದೆ. ಅಷ್ಟೆ ಅಲ್ಲದೇ ಅರ್ಜಿಸಲ್ಲಿಸುವ ಅವಧಿಯನ್ನು ಸಹ ಹೆಚ್ಚಿಸಿದೆ.  ಅರ್ಜಿ ಸಲ್ಲಿಸಲು ಏಪ್ರಿಲ್ 15 ಕೊನೆಯ ದಿನವಾಗಿದ್ದು. ಪರೀಕ್ಷಾ ದಿನವನ್ನು ಜುಲೈ7 ರಂದು ನಡೆಸಲು ತೀರ್ಮಾನಿಸಿದೆ.

RELATED ARTICLES

Related Articles

TRENDING ARTICLES