Friday, September 20, 2024

ದ್ವಿತೀಯ ಪಿಯುಸಿ ಪರೀಕ್ಷೆ-2ರ ವೇಳಾಪಟ್ಟಿ ಪ್ರಕಟ

ಬೆಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆ-2ರ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಇಂದು ಪ್ರಕಟಿಸಿದೆ.

ಏಪ್ರಿಲ್ 29ರಿಂದ ಮೇ 16ರವರೆಗೆ ಪರೀಕ್ಷೆ ಆಯೋಜಿಸಲಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

ಏಪ್ರಿಲ್ 29ರಂದು ಕನ್ನಡ, ಏಪ್ರಿಲ್ 30ರಂದು ಇತಿಹಾಸ, ಭೌತಶಾಸ್ತ್ರ, ಮೇ 2ರಂದು ಇಂಗ್ಲಿಷ್, ಮೇ 3ರಂದು ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ ವಿಷಯದ ಪರೀಕ್ಷೆ ನಡೆಯಲಿದೆ.. ಮೇ 4ರಂದು ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ, ಮೇ 9ರಂದು ಗಣಿತ, ಶಿಕ್ಷಣಶಾಸ್ತ್ರ, ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ ವಿಷಯದ ಪರೀಕ್ಷೆ ನಡೆಯಲಿದೆ.

ಇನ್ನು ಮೇ 11ರಂದು ಭೂಗೋಳಶಾಸ್ತ್ರ, ಜೀವಶಾಸ್ತ್ರ, ಸಮಾಜಶಾಸ್ತ್ರ,  ಮೇ 13ರಂದು ಅರ್ಥಶಾಸ್ತ್ರ, ಮೇ 14ರಂದು ಐಚ್ಛಿಕ ಕನ್ನಡ, ಮೇ 15ರಂದು ಹಿಂದಿ ವಿಷಯ ಹಾಗೂ ಮೇ 16ರಂದು ತಮಿಳು ಸೇರಿದಂತೆ ಇತರೆ ಭಾಷಾ ವಿಷಯಗಳ ಪರೀಕ್ಷೆಗಳು ನಡೆಯಲಿವೆ.

RELATED ARTICLES

Related Articles

TRENDING ARTICLES