Sunday, May 19, 2024

ಟಾಸ್ ಗೆದ್ದ RCB ಬೌಲಿಂಗ್ ಆಯ್ಕೆ : ಮ್ಯಾಕ್ಸ್​ವೆಲ್, ಸಿರಾಜ್ ತಂಡದಿಂದ ಔಟ್

ಬೆಂಗಳೂರು : ಸನ್‌ರೈಸರ್ಸ್‌ ಹೈದರಾಬಾದ್‌ ವಿರುದ್ಧ ಟಾಸ್ ಗೆದ್ದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ನಾಯಕ ಫಾಫ್ ಡು ಪ್ಲೆಸಿಸ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು.

ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್​ನ 30ನೇ ಪಂದ್ಯ ನಡೆಯಲಿದೆ. ಇದು ಆರ್​ಸಿಬಿಗೆ ಮಾಡು ಇಲ್ಲವೆ ಮಡಿ ಪಂದ್ಯವಾಗಿದೆ. ಪ್ಲೇಆಪ್​ಗೆ ಪ್ರವೇಶಿಸಬೇಕಾದರೆ ಇಂದಿನ ಪಂದ್ಯ ಸೇರಿದಂತೆ ಎಂಟೂ ಪಂದ್ಯಗಳನ್ನು RCB ಗೆಲ್ಲಲೇಬೇಕು.

ಐಪಿಎಲ್​ ಇತಿಹಾಸದಲ್ಲಿ ಉಭಯ ತಂಡಗಳು ಈವರೆಗೆ ಒಟ್ಟು ಪಂದ್ಯ 23 ಬಾರಿ ಮುಖಾಮುಖಿಯಾಗಿವೆ. ರಾಯಲ್ ಚಾಲೆಂಜರ್ಸ್‌ ಬೆಂಗಳೂರು 10 ಹಾಗೂ ಸನ್‌ ರೈಸರ್ಸ್‌ ಹೈದ್ರಾಬಾದ್ 12 ಪಂದ್ಯ ಗೆದ್ದಿದೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್​ಸಿಬಿ 5 ಹಾಗೂ ಹೈದ್ರಾಬಾದ್ 2 ಪಂದ್ಯದಲ್ಲಿ ಜಯ ಸಾಧಿಸಿದೆ.

ಪ್ರಸಕ್ತ ಟೂರ್ನಿಯಲ್ಲಿ RCB 6 ಪಂದ್ಯಗಳನ್ನು ಆಡಿದ್ದು, 5 ಪಂದ್ಯ ಸೋತು ಒಂದು ಪಂದ್ಯ ಗೆದ್ದಿದೆ. ಹೈದರಾಬಾದ್ ಆಡಿರುವ 5 ಪಂದ್ಯಗಳಲ್ಲಿ 3 ರಲ್ಲಿ ಗೆಲುವು ಹಾಗೂ 2 ಪಂದ್ಯ ಸೋತಿದೆ. RCB ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. SHR 6 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ.

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು 

ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ವಿಲ್ ಜ್ಯಾಕ್ಸ್, ರಜತ್ ಪಾಟಿದಾರ್, ಸೌರವ್ ಚೌಹಾಣ್, ದಿನೇಶ್ ಕಾರ್ತಿಕ್ (ವಿ.ಕೀ.), ಮಹಿಪಾಲ್ ಲೊಮ್ರೋರ್, ವಿಜಯ್​ಕುಮಾರ್ ವೈಶಾಕ್, ರೀಸ್ ಟೋಪ್ಲಿ, ಲಾಕಿ ಫರ್ಗುಸನ್, ಯಶ್ ದಯಾಲ್

ಸನ್‌ರೈಸರ್ಸ್ ಹೈದರಾಬಾದ್

ಪ್ಯಾಟ್ ಕಮಿನ್ಸ್ (ನಾಯಕ), ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ, ಐಡೆನ್ ಮಾರ್ಕ್ರಾಮ್, ನಿತೀಶ್ ರೆಡ್ಡಿ, ಹೆನ್ರಿಚ್ ಕ್ಲಾಸೆನ್(ವಿ.ಕೀ.), ಅಬ್ದುಲ್ ಸಮದ್, ಶಹಬಾಜ್ ಅಹ್ಮದ್, ಭುವನೇಶ್ವರ್ ಕುಮಾರ್, ಜಯದೇವ್ ಉನಾದ್ಕತ್, ಟಿ. ನಟರಾಜನ್

RELATED ARTICLES

Related Articles

TRENDING ARTICLES