Tuesday, May 21, 2024

ನಾಳೆ ಮತ್ತು ಏಪ್ರಿಲ್ 19ರಂದು CET ಪರೀಕ್ಷೆ

ನಾಳೆ ಏ.18 ಮತ್ತು ಏಪ್ರಿಲ್ 19ನೇ ತಾರೀಖು ಸಿಇಟಿ ಪರೀಕ್ಷೆ ನಡೆಯಲಿದೆ. ಪ್ರತಿದಿನ‌ 2 ಪತ್ರಿಕೆಗಳಿಗೆ ಪರೀಕ್ಷೆ ನಡೆಯಲಿದೆ. ಏಪ್ರಿಲ್ 18 ಜೀವ ಶಾಸ್ತ್ರ ಮತ್ತು ಗಣಿತ ಶಾಸ್ತ್ರಕ್ಕೆ ಪರೀಕ್ಷೆ ನಡೆಯಲಿದೆ. ಏಪ್ರಿಲ್ 19 ಭೌತ ಶಾಸ್ತ್ರ ಮತ್ತು ರಸಾಯನ ಶಾಸ್ತ್ರಕ್ಕೆ ಪರೀಕ್ಷೆ ನಡೆಯಲಿದೆ.

ಮೊದಲ ಅವಧಿಯ ಪರೀಕ್ಷೆ ಬೆಳ್ಳಗೆ 10:30 ರಿಂದ 11:50ರವರೆಗೆ ನಡೆಯಲಿದ್ದು, ಎರಡನೇ ಅವಧಿ ಪರೀಕ್ಷೆ 2:30 ರಿಂದ 3:50ರವರೆಗೆ ನಡೆಯಲಿದೆ. ಅಭ್ಯರ್ಥಿಗಳಿಗೆ ಈಗಾಗಲೇ ಪ್ರವೇಶ ಪತ್ರವನ್ನ ವೆಬ್‌ಸೈಟ್ ಮೂಲಕ ಡೌನ್‌ಲೋಡ್ ಮಾಡಿಕೊಳ್ಳಲು ಸೂಚಿಸಲಾಗಿದ್ದು, ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ತೋರಿಸಿದರೆ ಮಾತ್ರ ಪರೀಕ್ಷಾ ಕೇಂದ್ರದೊಳಗೆ ಪ್ರವೇಶ ನೀಡಲಾಗುತ್ತದೆ.

ಇದನ್ನೂ ಓದಿ : ಇಂದು ಹಿರಿಯ ನಟ ದ್ವಾರಕೀಶ್‌ ಅಂತ್ಯಕ್ರಿಯೆ

ಪರೀಕ್ಷೆಗಳು ಸುಗಮ ಹಾಗೂ ಶಾಂತಿಯುತವಾಗಿ ನಡೆಯುವ ಉದ್ದೇಶದಿಂದ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.

RELATED ARTICLES

Related Articles

TRENDING ARTICLES