Monday, October 7, 2024

ಪ್ರಜ್ವಲ್ ಪಾಸ್​ಪೋರ್ಟ್ ರದ್ದುಗೊಳಿಸಿ : ಪ್ರಧಾನಿಗೆ ಸಿದ್ದರಾಮಯ್ಯ ಪತ್ರ

ಬೆಂಗಳೂರು : ಪ್ರಜ್ವಲ್‌ ರೇವಣ್ಣ ರಾಸಲೀಲೆ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಇದೀಗ ಈ ಪ್ರಕರಣದ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

ಸಂಸದ ಪ್ರಜ್ವಲ್‌ ರೇವಣ್ಣ ಅವರ ಪಾಸ್‌ಪೋರ್ಟ್ ರದ್ದುಗೊಳಿಸುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ. ಈ ಪ್ರಕರಣದಲ್ಲಿ ವಿದೇಶಾಂಗ ಸಚಿವಾಲಯ ಮಧ್ಯಪ್ರವೇಶಿಸುವಂತೆಯೂ ಆಗ್ರಹಿಸಿದ್ದಾರೆ.

ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅಸಂಖ್ಯಾತ ಮಹಿಳೆಯರ ಮೇಲೆ ಲೈಂಗಿಕ ಶೋಷಣೆ ಮಾಡಿದ್ದಾರೆ. ಅವರ ವಿರುದ್ಧದ ಆರೋಪಗಳು ನಾಚಿಕೆ ಗೇಡಿನದ್ದು. ಇದು ದೇಶದ ಆತ್ಮಸಾಕ್ಷಿಯನ್ನೇ ಅಲ್ಲಾಡಿಸಿದ ಪ್ರಕರಣವಾಗಿದೆ. ಪ್ರಕರಣ ಹೊರಬಿದ್ದ ಕೂಡಲೇ ಪ್ರಜ್ವಲ್ ವಿದೇಶಕ್ಕೆ ತೆರಳಿದ್ದಾರೆ. ಅವರು ತಮ್ಮ ರಾಜತಾಂತ್ರಿಕ ಪಾಸ್​ಪೋರ್ಟ್​ನಲ್ಲೇ ವಿದೇಶಿ ಪ್ರವಾಸ ಮಾಡುತ್ತಿದ್ದಾರೆ. ಈ ಬಗ್ಗೆ ನಮಗೆ ಮಾಹಿತಿ ತಿಳಿದು ಬಂದಿದೆ ಎಂದು ಹೇಳಿದ್ದಾರೆ.

ಎಸ್​ಐಟಿ ತನಿಖೆ ನಡೆಯುತ್ತಿರುವ ಸಂಬಂಧ ಪ್ರಜ್ವಲ್ ರೇವಣ್ಣ ಈ ದೇಶಕ್ಕೆ ವಾಪಸ್ ಕರೆತರಬೇಕು. ದೇಶದ ಕಾನೂನಿನ ಪ್ರಕಾರ ತನಿಖೆ ವಿಚಾರಣೆ ನಡೆಸಬೇಕು. ಹಾಗಾಗಿ, ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದುಗೊಳಿಸಿ. ಅಲ್ಲದೆ, ಅಂತರಾಷ್ಟ್ರೀಯ ಏಜೆನ್ಸಿ ಮೂಲಕ ಪ್ರಜ್ವಲ್ ರೇವಣ್ಣ ಕರೆತರಲು ಸಹಕರಿಸಿ ಎಂದು ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

RELATED ARTICLES

Related Articles

TRENDING ARTICLES