Friday, May 17, 2024

ಪ್ರಜ್ವಲ್‌ ಪಾಸ್‌ಪೋರ್ಟ್ ರದ್ದುಗೊಳಿಸುವಂತೆ ಸಿಎಂ ಮನವಿ

ಬೆಂಗಳೂರು: ಪ್ರಜ್ವಲ್‌ ರೇವಣ್ಣ ರಾಸಲೀಲೆ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಇದೀಗ ಈ ಪ್ರಕರಣದ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಪ್ರಜ್ವಲ್‌ ರೇವಣ್ಣ ಅವರ ಪಾಸ್‌ಪೋರ್ಟ್ ರದ್ದುಗೊಳಿಸುವಂತೆ ಮನವಿ ಮಾಡಿದ್ದಾರೆ.

ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರು ಅಸಂಖ್ಯಾತ ಮಹಿಳೆಯರ ಮೇಲೆ ಲೈಂಗಿಕ ಶೋಷಣೆ ಮಾಡಿದ್ದಾರೆ. ಅವರ ವಿರುದ್ಧದ ಆರೋಪಗಳು ಭಯಾನಕ ಮತ್ತು ನಾಚಿಕೆ ಗೇಡಿನದ್ದು, ಇದು ದೇಶದ ಆತ್ಮ ಸಾಕ್ಷಿಯನ್ನೇ ಅಲ್ಲಾಡಿಸಿದ ಪ್ರಕರಣವಾಗಿದೆ. ಪ್ರಕರಣ ಹೊರ ಬಿದ್ದ ಕೂಡಲೇ ಪ್ರಜ್ವಲ್ ವಿದೇಶಕ್ಕೆ ತೆರಳಿದ್ದಾರೆ. ಅವರು ತಮ್ಮ ರಾಜತಾಂತ್ರಿಕ ಪಾಸ್ ಪೋರ್ಟ್ ನಲ್ಲೆ ವಿದೇಶಿ ಪ್ರವಾಸ ಮಾಡುತ್ತಿದ್ದಾರೆ. ಈ ಬಗ್ಗೆ ನಮಗೆ ಮಾಹಿತಿ ತಿಳಿದು ಬಂದಿದೆ.

ಇದನ್ನೂ ಓದಿ: ಬಂಧನ ಭೀತಿಗೆ ಬೆಚ್ಚಿಬಿದ್ದ ‘ಪೋಲಿ’ ಸಂಸದ : ‘ಪೆನ್​ಡ್ರೈವ್ ಪ್ರಜ್ವಲ್’ನ ಹೊಸ ಆಟ ಶುರು

ಎಸ್ ಐಟಿ ತನಿಖೆ ನಡೆಯುತ್ತಿರುವ ಸಂಬಂಧ ರೇವಣ್ಣ ಈ ದೇಶಕ್ಕೆ ವಾಪಾಸ್ ಕರೆತರಬೇಕು. ದೇಶದ ಕಾನೂನಿನ ಪ್ರಕಾರ ತನಿಖೆ ವಿಚಾರಣೆ ನಡೆಸಬೇಕು. ಹಾಗಾಗಿ ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದುಗೊಳಿಸಿ, ಅಲ್ಲದೆ ಅಂತರಾಷ್ಟ್ರೀಯ ಏಜೆನ್ಸಿ ಮೂಲಕ ಪ್ರಜ್ವಲ್ ರೇವಣ್ಣ ಕರೆತರಲು ಸಹಕರಿಸಿ ಎಂದು ಪ್ರಧಾನಿಗೆ ಬರೆದ ಪತ್ರದಲ್ಲಿ ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

RELATED ARTICLES

Related Articles

TRENDING ARTICLES