ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ದೌರ್ಜನ್ಯ ಹಗರಣ ಇದೀಗ ಮೈಸೂರಿಗೂ ವ್ಯಾಪಿಸಿದೆ. ಮೈಸೂರಿನಲ್ಲೂ ಒಂದು ಲೈಂಗಿಕ ಕಿರುಕುಳ ಹಾಗೂ ಅಪಹರಣ ಪ್ರಕರಣ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿದೆ.
ಇದನ್ನೂ ಓದಿ: Prajwal Revanna Pendrive Case: ಲುಕ್ಔಟ್ ನೋಟೀಸ್ ಜಾರಿ
ತಾಯಿಯನ್ನು ಅಪಹರಣ ಮಾಡಲಾಗಿದೆ ಎಂದು ಆರೋಪಿಸಿ ಪುತ್ರ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ. ಮೈಸೂರಿನ ಕೆ.ಆರ್.ನಗರ ತಾಲೂಕಿನಲ್ಲಿ ಘಟನೆ ನಡೆದಿದೆ. “ಪ್ರಜ್ವಲ್ ರೇವಣ್ಣನಿಂದ ನನ್ನ ತಾಯಿಯೂ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾರೆ. ಈ ಸಂಬಂಧ ಫೋಟೋಗಳು ಬಹಿರಂಗ ಆಗಿದ್ದವು. ಬಳಿಕ ನನ್ನ ತಾಯಿ ನಾಪತ್ತೆ ಆಗಿದ್ದಾರೆ. ಶಾಸಕ ಎಚ್.ಡಿ.ರೇವಣ್ಣ, ಪತ್ನಿ ಭವಾನಿ ರೇವಣ್ಣ ಅಪಹರಣ ಮಾಡಿಸಿದ್ದಾರೆ” ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ದೂರಿನ ಬಗ್ಗೆ ಪೊಲೀಸರು ಪ್ರಾಥಮಿಕ ಮಾಹಿತಿ ಕಲೆಹಾಕುತ್ತಿದ್ದಾರೆ. ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಹಾಗೂ ಎಚ್.ಡಿ ರೇವಣ್ಣ ವಿರುದ್ಧ ದಾಖಲಾಗಿರುವ ದೂರಿನ ತನಿಖೆಗೆ ಎಸ್ಐಟಿ ರಚನೆ ಮಾಡಿರುವಂತೆ ಈ ದೂರು ಕೂಡ ಹೊರಬಂದಿದೆ.