ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋಗಳ ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿ ಪ್ರಜ್ವಲ್ ರೇವಣ್ಣ ತಾಯಿ, ಭವಾನಿ ರೇವಣ್ಣಗೂ ಎಸ್ಐಟಿ ನೋಟಿಸ್ ನೀಡಿದೆ.
ಪ್ರಜ್ವಲ್ ರೇವಣ್ಣನಿಂದ ಲೈಂಗಿಕ ದೌರ್ಜನ್ಯಕ್ಕೊಳಗಾಗಿರುವ ಸಂತ್ರಸ್ತ ಮಹಿಳೆ ರೇವಣ್ಣ ಮನೆಯಲ್ಲಿ ಮನೆಗೆಲಸ ಮಾಡುತ್ತಿದ್ದ ವೇಳೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ ಆರೋಪದ ಹಿನ್ನಲೆ ಮನೆಗೆಲಸದಾಕೆ ನೀಡಿದ ದೂರಿನ ಆಧಾರದ ಮೇಲೆ ನೋಟಿಸ್ ನೀಡಲಾಗಿದೆ.
ಇದನ್ನೂ ಓದಿ: ರೇವಣ್ಣ ವಿರುದ್ದ ಸಂತ್ರಸ್ತೆಯ ಪುತ್ರ ದೂರು ದಾಖಲು: FIR ನಲ್ಲಿ ಏನಿದೆ?
ಇಲ್ಲಿನ ಸ್ಥಳೀಯ ಪೊಲೀಸರ ಮೂಲಕ SIT ನೋಟಿಸ್ ನೀಡಿದ್ದು ವಿಚಾರಣೆಗೆ ಇಂದು ಅಥವಾ ನಾಳೆ ಹಾಜರಾಗುವಂತೆ ನೊಟೀಸ್ನಲ್ಲಿ ತಿಳಿಸಲಾಗಿದೆ.