Thursday, September 19, 2024

ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್? : ಅಪ್ರಾಪ್ತೆಯನ್ನು ಗರ್ಭಿಣಿ ಮಾಡಿ ಕೊಲೆ ಬೆದರಿಕೆ

ಹುಬ್ಬಳ್ಳಿ : ನೇಹಾ ಕೊಲೆ ಪ್ರಕರಣ ಮಾಸುವ ಮುನ್ನವೇ ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದೆ. ಅನ್ಯಕೋಮಿನ ಯುವಕನೊಬ್ಬ ಅಪ್ರಾಪ್ತೆಯನ್ನು ಗರ್ಭಿಣಿ ಮಾಡಿ, ಕೊಲೆ ಬೆದರಿಕೆ ಹಾಕಿದ್ದಾನೆ.

ಹುಬ್ಬಳ್ಳಿ ನವನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಪ್ರಸ್ತುತ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸದ್ದಾಂ ಬಂಧಿತ ಆರೋಪಿ.

ಈ ಕುರಿತು ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ್‌ ಮಾಹಿತಿ ನೀಡಿದ್ದು, ಆರೋಪಿ ಸದ್ದಾಂನನ್ನ ಬಂಧಿಸಲಾಗಿದೆ. ಈತ 17 ವರ್ಷದ ಅಪ್ರಾಪ್ತೆಯ ಜೊತೆ ಸ್ನೇಹ ಬೆಳಸಿದ್ದ. ಆಕೆಯೊಂದಿಗೆ ಬಲವಂತವಾಗಿ ದೈಹಿಕ ಸಂಭೋಗ ಮಾಡಿದ್ದಾನೆ. ಜೀವ ಬೆದರಿಕೆ, ಜಾತಿ ನಿಂದನೆ ಆರೋಪದಡಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಹೇಳಿದ್ದಾರೆ.

ಘಟನೆ ಬೆಳಕಿಗೆ ಬಂದಿದ್ದು ಹೇಗೆ?

ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಮಗಳನ್ನು ಪೋಷಕರು ಕಿಮ್ಸ್‌ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಈ ವೇಳೆ ಮಗಳು ಗರ್ಭಿಣಿಯಾಗಿರುವ ಬಗ್ಗೆ ವೈದ್ಯರು ಮಾಹಿತಿ ನೀಡಿದ್ದಾರೆ. ಇದರಿಂದ ಪೋಷಕರು ಭಯಗೊಂಡಿದ್ದಾರೆ. ಸದ್ಯ ಕಿಮ್ಸ್ ಆಸ್ಪತ್ರೆಯಲ್ಲಿ ಸಂತ್ರಸ್ಥೆಗೆ ಚಿಕಿತ್ಸೆ ನೀಡಲಾಗುತ್ತಿದೆ.

ಈ ಸಂಬಂಧ ಬಾಲಕಿಯ ಪೋಷಕರು ಹುಬ್ಬಳ್ಳಿಯ ನವನಗರ ಎಪಿಎಂಸಿ ಠಾಣೆಗೆ ದೂರು ನೀಡಿದ್ದರು. ಪ್ರಕರಣ ಬೆಳಕಿಗೆ ಬಂದು 24 ಗಂಟೆಯಾದರೂ ಪೊಲೀಸರು ಎಫ್‌ಐಆರ್‌ ದಾಖಲಿಸಿರಲಿಲ್ಲ. ಹೀಗಾಗಿ, ಪೊಲೀಸರ ವಿರುದ್ಧ ಹಿಂದೂ ಸಂಘಟನೆಗಳ ಸದಸ್ಯರು ಆಕ್ರೋಶ ವ್ಯಕ್ತಪಡಿಸಿ, ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆ ಬೆನ್ನಲ್ಲೇ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿ ಸದ್ದಾಂನನ್ನು ಬಂಧಿಸಿದ್ದಾರೆ.

RELATED ARTICLES

Related Articles

TRENDING ARTICLES