ಬೆಂಗಳೂರು: ಬಾರ್ಗೆ ನುಗ್ಗಿದ ಇಬ್ಬರು ಕಳ್ಳರು ಬಾರ್ನಲ್ಲಿದ್ದ ಹಣ ದೋಚಿ ಪರಾರಿಯಾಗಿರುವ ಘಟನೆ ನಗರದ ಟಿಸಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕಳೆದ ರಾತ್ರಿ 2.30ರ ಸುಮಾರಿಗೆ ಟಿಸಿಪಾಳ್ಯದ ಬಳಿ ಇರುವ ಭಾಗ್ಯ ಬಾರ್ಗೆ ಎಂಟ್ರಿಕೊಟ್ಟು ಇಬ್ಬರು ಕಳ್ಳರು ತಮ್ಮ ಕೈಚಳಕವನ್ನು ತೋರಿದ್ದಾರೆ. ಕಳ್ಳತನಕ್ಕೂ ಮುನ್ನ ತಮ್ಮ ಗುರುತು ಪತ್ತೆಯಾಗಬಾರದು ಎಂದು ತಲೆಗೆ ಹೆಲ್ಮೆಟ್ ಧರಿಸಿ ಬಂದು ಬಾರ್ ಶೆಟರ್ ಮುರಿದು ಬಾರ್ ಕ್ಯಾಶ್ ಕೌಂಟರ್ನಲ್ಲಿದ್ದ 60 ಸಾವಿರ ಹಣವನ್ನು ಕದ್ದಿದ್ದಾರೆ ಇದೇ ವೇಳೆ ಬಾರ್ನಲ್ಲಿದ್ದ ಸಿಸಿಟಿವಿಯ ಡಿವಿಆರ್ ಸಮೇತ ಕಳ್ಳರು ಪರಾರಿಯಾಗಿದ್ದಾರೆ. ದೃಶ್ಯಗಳು ಸಿಸಿಟಿಯಲ್ಲಿ ಸೆರೆಯಾಗಿದೆ.
ಇದನ್ನೂ ಓದಿ: ದೊಡ್ಡಬಳ್ಳಾಪುರದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ
ಟಿಸಿಪಾಳ್ಯದಲ್ಲಿರುವ ಭಾಗ್ಯಬಾರ್ ನಲ್ಲಿ ಎರಡನೇ ಬಾರಿಗೆ ಕಳ್ಳತನ ಕೃತ್ಯ ನಡೆದಿದ್ದು ಘಟನೆ ಸಂಬಂಧ ಕೆ ಆರ್ ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.