Friday, September 20, 2024

ಬೆಂಗಳೂರಿನಾದ್ಯಂತ 2 ದಿನ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಮೇ 19ರಿಂದ 2 ದಿನಗಳ ಕಾಲ ಬೆಂಗಳೂರಿನಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿ ಯೆಲ್ಲೋ ಅಲರ್ಟ್​ ಘೋಷಿಸಿದೆ.

ಇಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು,ವಿಜಯನಗರದ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕಲಬುರಗಿಯಲ್ಲಿ 39.3 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

ಇದನ್ನೂ ಓದಿ: SSLC ಟಾಪರ್ ಅಂಕಿತಾಗೆ 5 ಲಕ್ಷ, ನವನೀತ್​ಗೆ 3 ಲಕ್ಷ ನೆರವು ಘೋಷಿಸಿದ ಸಿದ್ದರಾಮಯ್ಯ

ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ವಿಜಯಪುರ, ಯಾದಗಿರಿ, ದಕ್ಷಿಣ ಒಳನಾಡಿನ ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗ ಸೇರಿದಂತೆ ಹಲವೆಡೆ ಮಳೆಯಾಗಲಿದೆ.

RELATED ARTICLES

Related Articles

TRENDING ARTICLES