Friday, September 20, 2024

ಬೈಕ್​​ಗೆ ಟಿಪ್ಪರ್ ಡಿಕ್ಕಿ : ಸ್ಥಳದಲ್ಲೇ ಇಬ್ಬರು ದುರ್ಮರಣ

ಕಲಬುರಗಿ : ಬೈಕ್​ಗೆ ಟಿಪ್ಪರ್ ಲಾರಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ಅಳ್ಳಗಿ ಕ್ರಾಸ್ ಬಳಿ ನಡೆದಿದೆ.

ದೇವಾನಂದ್ ಘತ್ತರಗಿ (25) ಹಾಗೂ ಬಸವರಾಜ್ ದುರ್ಗ (56) ಮೃತ ದುರ್ದೈವಿಗಳು. ಮೃತ ಇಬ್ಬರು ಅಫಜಲಪುರ ತಾಲೂಕಿನ ಹೊಸುರು ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ.

ಚೌಡಾಪುರದಿಂದ ಸ್ವಗ್ರಾಮಕ್ಕೆ ಬೈಕ್​ನಲ್ಲಿ ತೆರಳುತ್ತಿದ್ದ ವೇಳೆ ಟಿಪ್ಪರ್ ಲಾರಿ ಡಿಕ್ಕಿಯಾಗಿದೆ. ಟಿಪ್ಪರ್ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಚಾಲಕ ಹಾಗೂ ಹಿಂಬದಿ ಕುಳಿತಿದ್ದಾತ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಅಪಘಾತ ಸಂಭವಿಸಿದ ಬಳಿಕ ಟಿಪ್ಪರ್ ಲಾರಿಯನ್ನು ಸ್ಥಳದಲ್ಲೇ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಅಫಜಲಪುರ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಅಫಜಲಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

Related Articles

TRENDING ARTICLES