ಬೆಂಗಳೂರು : ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡ ಭರ್ಜರಿ ಗೆಲುವು ದಾಖಲಿಸಿತು. ಈ ಗೆಲುವಿನೊಂದಿಗೆ SRH ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿತು.
ಹೈದರಾಬಾದ್ನ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯ ಟಾಸ್ ಗೆದ್ದ ಪಂಜಾಬ್ 214 ರನ್ ಪೇರಿಸಿತು. ಈ ಬೃಹತ್ ಟಾರ್ಗೆಟ್ ಬೆನ್ನಟ್ಟಿದ ಹೈದರಾಬಾದ್ 19.1 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು ಗೆಲುವಿನ ನಗೆ ಬೀರಿತು.
ಇನ್ನಿಂಗ್ಸ್ ಆರಂಭಿಸಿದ ಹೈದರಾಬಾದ್ಗೆ ಉತ್ತಮ ಆರಂಭ ಸಿಗಲಿಲ್ಲ. ಸ್ಫೋಟಕ ಬ್ಯಾಟರ್ ಟ್ರಾವಿಸ್ ಹೆಡ್ ಮೊದಲ ಎಸೆತದಲ್ಲೇ ಕ್ಲೀನ್ ಬೌಲ್ಡ್ ಆದರು. ಬಳಿಕ ಜೊತೆಯಾದ ಅಭಿಷೇಕ್ ಶರ್ಮಾ ಹಾಗೂ ರಾಹುಲ್ ತ್ರಿಪಾಠಿ 72 ರನ್ಗಳ ಉತ್ತಮ ಜೊತೆಯಾಟ ನೀಡಿದರು. ತ್ರಿಪಾಠಿ 33 ರನ್ ಗಳಿಸಿ ಔಟಾದರು.
ಬಳಿಕ ಕ್ರೀಸ್ಗೆ ಬಂದ ನಿತೀಶ್ ರೆಡ್ಡಿ ಅಭಿಷೇಕ್ ಜೊತೆ 57 ರನ್ಗಳ ಕಾಣಿಕೆ ನೀಡಿದರು. ನಿತೀಶ್ ಸಹ 37 ರನ್ಗೆ ಆಟ ಮುಗಿಸಿದರು. ಒಂದೆಡೆ ವಿಕೆಟ್ ಬೀಳುತ್ತಿದ್ದರೂ ಅಭಿಷೇಕ್ ಶರ್ಮಾ ಜವಾಬ್ದಾರಿಯುತ ಆಟವಾಡಿದರು. 28 ಎಸೆತಗಳಲ್ಲಿ 6 ಸಿಕ್ಸ್ ಹಾಗೂ 5 ಬೌಂಡರಿಗಳೊಂದಿಗೆ 66 ರನ್ ಸಿಡಿಸಿ ಔಟಾದರು. ಕೊನೆಯಲ್ಲಿ ಹೆನ್ರಿಚ್ ಕ್ಲಾಸೆನ್ (42) ಅಬ್ಬರಿಸುವ ಮೂಲಕ ಹೈದರಾಬಾದ್ ತಂಡವನ್ನು ಗೆಲುವಿನ ದಡ ಸೇರಿಸಿದರು.
ಅಭಿಷೇಕ್ ಶರ್ಮಾಗೆ ಪಂದ್ಯಶ್ರೇಷ್ಠ ಪ್ರಶಸ್ತಿ
ಕೊನೆಯಲ್ಲಿ ಅಬ್ದುಲ್ ಸಮದ್ ಅಜೇಯ 11 ಹಾಗೂ ಸನ್ವಿರ್ ಸಿಂಗ್ 6 ರನ್ ಗಳಿಸಿದರು. ಪಂಜಾಬ್ ಕಿಂಗ್ಸ್ ಪರ ಹರ್ಷಲ್ ಪಟೇಲ್ ಹಾಗೂ ಅರ್ಷದೀಪ್ ಸಿಂಗ್ ತಲಾ ಎರಡು ವಿಕೆಟ್ ಪಡೆದರು. ಶಶಾಂಕ್ ಸಿಂಗ್ ಹಾಗೂ ಹರ್ಪ್ರೀತ್ ಬ್ರಾರ್ ತಲಾ ಒಂದು ವಿಕೆಟ್ ಪಡೆದರು. ಅಭಿಷೇಕ್ ಶರ್ಮಾ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಈ ಸೋಲಿನೊಂದಿಗೆ ಪಂಜಾಬ್ ಕಿಂಗ್ಸ್ ಟೂರ್ನಿಗೆ ವಿದಾಯ ಹೇಳಿತು.
A successful chase of 2⃣1⃣5⃣ with 5 balls to spare! 😮@SunRisers finish their final league stage game with a 4⃣-wicket win at home 🧡
Scorecard ▶️ https://t.co/K5rcY5Z8FS#TATAIPL | #SRHvPBKS pic.twitter.com/bwE7HjnMz9
— IndianPremierLeague (@IPL) May 19, 2024