Thursday, September 19, 2024

ಹಿಟ್ ಅಂಡ್ ರನ್ : ಯುವತಿ ಉಸಿರು ಕಸಿದ ‘ಕಿಲ್ಲರ್’ ಲಾರಿ

ವಿಜಯನಗರ : ಹಿಟ್​ ಆ್ಯಂಡ್​​​ ರನ್​ಗೆ ಯುವತಿ ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಶಿವಪುರ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ.

ಬೈಕ್​ಗೆ ಲಾರಿ ಡಿಕ್ಕಿ ಹೊಡೆದಿದ್ದು, ಬೈಕ್ ಮೇಲಿದ್ದ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಯುವಕನಿಗೆ ಗಂಭೀರ ಗಾಯವಾಗಿದೆ. ಅಪಘಾತದ ಬಳಿಕ ಲಾರಿ ಚಾಲಕ ಪರಾರಿಯಾಗಿದ್ದಾನೆ.

ಮೇಘನಾ (18) ಮೃತಪಟ್ಟಿರುವ ದುರ್ದೈವಿ. ಗಂಭೀರ ಗಾಯಗೊಂಡಿರುವ ಯುವಕ ಕೈಲಾಶ್ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮೃತ ಯುವತಿ ಹಾಗೂ ಯುವಕ ಹೊಸಪೇಟೆಯಿಂದ ಕೂಡ್ಲಿಗಿ ಕಡೆ ಹೊರಟಿದ್ದರು ಎಂದು ತಿಳಿದುಬಂದಿದೆ.

ಇನ್ನೂ ಅಪಘಾತದ ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಕೂಡ್ಲಿಗಿ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಕೂಡ್ಲಿಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಿಟ್ ಅಂಡ್ ರನ್ ಮಾಡಿದ ಲಾರಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

RELATED ARTICLES

Related Articles

TRENDING ARTICLES