Friday, September 20, 2024

ಜೂನ್​ 1ರಿಂದಲೇ ರಾಜ್ಯದಲ್ಲಿ ಮಾನ್ಸೂನ್​ ಮಳೆ ಆರಂಭ: ಹವಾಮಾನ ಇಲಾಖೆ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಜೂನ್ ಮೊದಲ ವಾರದಿಂದ ಮುಂಗಾರು ಪ್ರವೇಶಿಸಲಿದ್ದು, ಜೂನ್ 13 ಅಥವಾ 14ರಂದು ರಾಜಧಾನಿ ಬೆಂಗಳೂರಿನಲ್ಲಿ ಮಾನ್ಸೂನ್​ ಮಳೆಗಾಲ ಆರಂಭವಾಲಿದೆ ಎಂದು ಹವಾಮಾನ ಇಲಾಖೆ  ತಿಳಿಸಿದೆ.

ವರದಿಯ ಪ್ರಕಾರ, ನೈಋತ್ಯ ಮಾನ್ಸೂನ್ ಈಗಾಗಲೇ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಕ್ರೊಡೀಕರಣಗೊಂಡಿದೆ. ನೈಋತ್ಯ ಮುಂಗಾರು ಜೂನ್ 1 ಅಥವಾ 2ರಂದು ಕೇರಳ ಕರಾವಳಿಗೆ ತಲುಪುವ ಸಾಧ್ಯತೆ ಇದೆ. ಇದು ಜೂನ್ 6 ಅಥವಾ 7 ರಂದು ದಕ್ಷಿಣ ಕನ್ನಡದ ಮೂಲಕ ಕರ್ನಾಟಕ ಕರಾವಳಿಯನ್ನು ಪ್ರವೇಶಿಸಲಿದ್ದು, ಜೂನ್ 14 ರ ವೇಳೆಗೆ ಕ್ರಮೇಣ ದಕ್ಷಿಣ ಒಳನಾಡಿನ ಪ್ರದೇಶಗಳಿಗೆ ಹರಡಲಿದೆ ಎಂದು ಹಿರಿಯ ಹವಾಮಾನ ತಜ್ಞ ಸಿ.ಎಸ್.ಪಾಟೀಲ್ ಹೇಳಿದ್ದಾರೆ.

ಇದನ್ನೂ ಓದಿ: ಶಕ್ತಿ ಗ್ಯಾರಂಟಿ ಎಫೆಕ್ಟ್: ಬಸ್​ ನಲ್ಲಿ ವಿದ್ಯಾರ್ಥಿಗಳ ಜೀವಕ್ಕಿಲ್ಲ ಗ್ಯಾರಂಟಿ

ಜೂನ್ ಮೊದಲ ವಾರದವರೆಗೂ ಬೆಂಗಳೂರಿನಲ್ಲಿ ಮುಂಗಾರು ಪೂರ್ವ ಮಳೆಯಾಗಲಿದೆ. ಕಳೆದ ಕೆಲವು ದಿನಗಳಿಂದ ಬೆಂಗಳೂರಿನಲ್ಲಿ ಮಳೆ ನಿಂತಿದ್ದರೂ, ಈ ತಿಂಗಳ ಅಂತ್ಯದ ವೇಳೆಗೆ ನಗರಕ್ಕೆ ಮತ್ತೆ ಮಳೆ ಮರಳಲಿದೆ. ಜೂನ್ ಎರಡನೇ ವಾರದಲ್ಲಿ ಮುಂಗಾರು ನಗರಕ್ಕೆ ಆಗಮಿಸಲಿದೆ.

RELATED ARTICLES

Related Articles

TRENDING ARTICLES