ಬಾಗಲಕೋಟೆ: ಖಾಯಿಲೆಯಿಂದ ಬಳಲುತ್ತಿದ್ದ ಒಂದು ವರ್ಷದ ಮಗುವು ಅಂತ್ಯಸಂಸ್ಕಾರ ವೇಳೆ ಧಿಢೀರ್ ಕಣ್ಣುಬಿಟ್ಟು ಪವಾಡ ಸದೃಷ್ಯವಾಗಿ ಬದುಕಿ ಬಂದ ಅಚ್ಚರಿ ಘಟನೆ ಬಾಗಲಕೋಟೆ ಜಿಲ್ಲೆ ಇಳಕಲ್ ನಗರದಲ್ಲಿ ನಡೆದಿದೆ.
ಒಂದು ವರ್ಷದ ದ್ಯಾಮಣ್ಣ ಭಜಂತ್ರಿ ಎಂಬ ಮಗುವಿಗೆ ಉಸಿರಾಟ ತೊಂದರೆ, ಹೃದಯ ಸಂಬಂಧಿ ಖಾಯಿಲೆ ಸೇರಿದಂತೆ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿತ್ತು. ಹುಟ್ಟಿದಾಗಿನಿಂದ ಖಾಯಿಲೆಯಿಂದ ಬಳಲುತ್ತಿದ್ದ ಮಗುವನ್ನು ಕಳೆದ ನಾಲ್ಕು ದಿನಗಳಿಂದ ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು.ಈ ವೇಳೆ ವೈದ್ಯರು ಮಗು ಬದುಕೋದು ಕಷ್ಟ ಎಂದು ಹೇಳಿ ಡಿಸ್ಜಾರ್ಜ್ ಮಾಡಿದ್ದಾರೆ. ವಾಪಸ್ ವಾಹನದಲ್ಲಿ ಮನೆಗೆ ಬರುವಾಗ ಮಗು ಪ್ರಜ್ಞೆ ತಪ್ಪಿದೆ. ಪ್ರಜ್ಞೆ ತಪ್ಪಿದ ಮಗುವನ್ನು ಮೃತಪಟ್ಟಿದೆ ಎಂದು ಭಾವಿಸಿದ ಬಸವರಾಜ ಭಜಂತ್ರಿ ಹಾಗೂ ನೀಲಮ್ಮ ದಂಪತಿ, ಸಂಬಂಧಿಕರಿಗೆ ಸಾವಿನ ಸುದ್ದಿ ಮುಟ್ಟಿಸಿದ್ದಾರೆ.
ಇದನ್ನೂ ಓದಿ: ಕ್ರಿಕೆಟ್ ಫೈಟ್: ಎರಡು ಗುಂಪುಗಳ ನಡುವೆ ಘರ್ಷಣೆ, 10 ಜನರ ಬಂಧನ!