Thursday, September 19, 2024

ಮೇಕೆ ಮೇಯಿಸುತ್ತಿದ್ದ ಮಹಿಳೆಯನ್ನು ಕೊಂದು ತಿಂದ ಹುಲಿ!

ಮೈಸೂರು: ಬೆಟ್ಟದ ಬಳಿ ಮೇಕೆಗಳನ್ನು ಮೇಯಿಸುತ್ತಿದ್ದಾಗ ಹುಲಿಯೊಂದು ಹಠಾತ್ ದಾಳಿ ನಡೆಸಿ ಮಹಿಳೆಯನ್ನು ಹೊತ್ತೊಯ್ದ ಘಟನೆ ಹೆಚ್.ಡಿ.ಕೋಟೆ ತಾಲೂಕಿನ ಮೂರ್ಬಾಂದ್ ಬಳಿ ಶನಿವಾರ ಸಾಯಂಕಾಲ ನಡೆದಿದೆ.

ಮಾಳದ ಹಾಡಿ ನಿವಾಸಿ ಚಿಕ್ಕಿ (48) ಹುಲಿ ದಾಳಿಗೆ ಸಿಲುಕಿ ಮೃತಪಟ್ಟವರು. ಮೂರ್ಬಾಂದ್ ಬೆಟ್ಟದ ಸಮೀಪ ಮೇಕೆ ಮೇಯಿಸುತ್ತಿದ್ದಾಗ ಘಟನೆ ಸಂಭವಿಸಿದೆ. ಮಹಿಳೆಯೊಂದಿಗೆ ಕುರಿ ಮೇಯಿಸುತ್ತಿದ್ದ ಸಹಚರ ಗ್ರಾಮಕ್ಕೆ ತೆರಳಿ ಮಾಹಿತಿ ನೀಡಿದಾಗ ಘಟನೆ ಬೆಳಕಿಗೆ ಬಂದಿದೆ.

ಇದನ್ನೂ ಓದಿ:  ಮೇ 29ರ ವರೆಗೆ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಎಚ್ಚರಿಕೆ

ಘಟನಾ ಸ್ಥಳಕ್ಕೆ ಎನ್.ಬೇಗೂರು ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶನಿವಾರ ಮೃತದೇಹಕ್ಕಾಗಿ ಹುಡುಕಾಟ ನಡೆದರೂ ಕತ್ತಲು ಆವರಿಸಿದ್ದರಿಂದ ಸಿಕ್ಕಿರಲಿಲ್ಲ. ಬಳಿಕ ಭಾನುವಾರ ಬೆಳಗ್ಗೆ ಅರಣ್ಯ ವೀಕ್ಷಣೆಯ ಟವರ್ ಮೇಲೆ ಶವ ಪತ್ತೆಯಾಗಿದೆ.

ಮೃತ ಮಹಿಳೆಯ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಹೆಚ್.ಡಿ.ಕೋಟೆ ತಾಲೂಕಿನ ಅಂತರಸಂತೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

RELATED ARTICLES

Related Articles

TRENDING ARTICLES