ಹಾಸನ: ಹಾಸನ ಹೊರವಲಯದ ರಾಷ್ಟ್ರೀಯ ಹೆದ್ದಾರಿ 75ರ ಕಂದಲಿ ಸಮೀಪ ಇಂದು ಮುಂಜಾನೆ ನಡೆದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಎಲ್ಲಾ 6 ಜನರೂ ಸಾವನ್ನಪ್ಪಿರುವ ಘಟನೆ ನಡೆದಿದೆ.
ನಾರಾಯಣಪ್ಪ, ಸುನಂದಾ, ರವಿಕುಮಾರ್, ನೇತ್ರ, ಚೇತನ್ (ಬಾಲಕ) ಹಾಗು ರಾಕೇಶ್ (ಚಾಲಕ) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಕಾರು ಡಿವೈಡರ್ಗೆ ಡಿಕ್ಕಿ ಹೊಡೆದು ಪಕ್ಕದ ರಸ್ತೆಗೆ ಹಾರಿ ಕಂಟೇನರ್ಗೆ ಗುದ್ದಿದೆ. ನಜ್ಜುಗುಜ್ಜಾದ ಕಾರೊಳಗಿಂದ ಮೃತದೇಹಗಳನ್ನು ಹೊರತೆಗೆಯಲು ಪೊಲೀಸರು ಹರಸಾಹಸಪಟ್ಟರು.
ಇದನ್ನೂ ಓದಿ: ಮೇಕೆ ಮೇಯಿಸುತ್ತಿದ್ದ ಮಹಿಳೆಯನ್ನು ಕೊಂದು ತಿಂದ ಹುಲಿ!
ಇವರೆಲ್ಲಾ ಹೊಸಕೋಟೆ ತಾಲೂಕಿನವರಾಗಿದ್ದು, ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂಬಂಧಿಕರನ್ನು ನೋಡಲು ಈಟಿಯೋಸ್ ಕಾರಿನಲ್ಲಿ ಹೋಗಿದ್ದರು. ಬಳಿಕ ವಾಪಾಸ್ ಮಂಗಳೂರಿನಿಂದ ಹಿಂದಿರುಗುವಾಗ ಈ ದುರ್ಘಟನೆ ಸಂಭವಿಸಿದೆ.
ಸ್ಥಳಕ್ಕೆ ಹಾಸನ ಎಸ್ಪಿ ಮಹಮದ್ ಸುಚಿತಾ ಭೇಟಿ ನೀಡಿ ಪರಿಶೀಲಿಸಿದರು. ಹಾಸನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.