ಬೆಂಗಳೂರು : ಕೊನೆಗೂ ಕೋಟ್ಯಂತರ ಅಭಿಮಾನಿಗಳ ನಿರೀಕ್ಷೆ ನಿಜವಾಗಿದೆ. ಐಪಿಎಲ್-2024ರ ಫೈನಲ್ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು 8 ವಿಕೆಟ್ಗಳಿಂದ ಸೋಲಿಸಿದ ಕೊಲ್ಕತ್ತಾ ನೈಟ್ ರೈಡರ್ಸ್ 3ನೇ ಬಾರಿಗೆ ಐಪಿಎಲ್ ಪ್ರಶಸ್ತಿ ಗೆದ್ದುಕೊಂಡಿದೆ.
ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ನ ಫೈನಲ್ ಪಂದ್ಯದಲ್ಲಿ ನಡೆಯಿತು. ಈ ರೋಚಕ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಆರಂಭದಿಂದಲೂ ಸನ್ ರೈಸರ್ಸ್ ಹೈದರಾಬಾದ್ ಮೇಲೆ ಹಿಡಿತ ಸಾಧಿಸಿತು.
ಟಾಸ್ ಗೆದ್ದ ಸನ್ ರೈಸರ್ಸ್ ಹೈದರಾಬಾದ್ ತಂಡ ಮೊದಲು ಬ್ಯಾಟಿಂಗ್ ಮಾಡಿತು. 18.3 ಓವರ್ಗಳಲ್ಲಿ 113 ರನ್ಗಳಿಗೆ ಆಲೌಟ್ ಆಯಿತು. ಈ ಮೂಲಕ ಫೈನಲ್ ಪಂದ್ಯದಲ್ಲಿ ಅಲ್ಪ ಮೊತ್ತಕ್ಕೆ ಕುಸಿಯಿತು. ಈ ಸುಲಭ ಟಾರ್ಗೆಟ್ ಬೆನ್ನಟ್ಟಿದ ಕೊಲ್ಕತ್ತಾ ನೈಟ್ ರೈಡರ್ಸ್ 10.3 ಓವರ್ಗಳಲ್ಲಿ 2 ವಿಕೆಟ್ ಕಳೆದುಕೊಂಡು ಸುಲಭವಾಗಿ ಗೆಲುವಿನ ನಗೆ ಬೀರಿತು.
ಕೊಲ್ಕತ್ತಾ ನೈಟ್ ರೈಡರ್ಸ್ ಪರ ರಹಮಾನುಲ್ಲಾ ಗುರ್ಬಾಜ್ 39, ವೆಂಕಟೇಶ್ ಅಯ್ಯರ್ ಅಜೇಯ 52 ಹಾಗೂ ನಾಯಕ ಶ್ರೇಯಸ್ ಅಯ್ಯರ್ 6 ರನ್ ಗಳಿಸಿದರು. ಹೈದರಾಬಾದ್ ಪರ ನಾಯಕ ಪ್ಯಾಟ್ ಕಮ್ಮಿನ್ಸ್ ಹಾಗೂ ಶಹಬಾಜ್ ಅಹಮದ್ ತಲಾ ಒಂದು ವಿಕೆಟ್ ಪಡೆದರು.
ಈ ಬಾರಿಯ ಐಪಿಎಲ್-2024ರ ಅಂಕಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳನ್ನು ಅಲಂಕರಿಸಿದ್ದ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಸನ್ ರೈಸರ್ಸ್ ಹೈದರಾಬಾದ್ ತಂಡಗಳೇ ಫೈನಲ್ಗೆ ಪ್ರವೇಶಿಸಿದ್ದವು. ಮೇ 21ರಂದು ನಡೆದ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಹೈದರಾಬಾದ್ ತಂಡವನ್ನು ಮಣಿಸಿ ಕೆಕೆಆರ್ ಫೈನಲ್ ಪ್ರವೇಶಿಸಿತ್ತು. ಶುಕ್ರವಾರ ನಡೆದ 2ನೇ ಕ್ವಾಲಿಫೈಯರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಮಣಿಸಿ ಹೈದರಾಬಾದ್ ಫೈನಲ್ಗೆ ಎಂಟ್ರಿ ಕೊಟ್ಟಿತ್ತು.
𝗖𝗛𝗔𝗠𝗣𝗜𝗢𝗡𝗦 𝗢𝗙 #𝗧𝗔𝗧𝗔𝗜𝗣𝗟 𝟮𝟬𝟮𝟰 😍🏆
The 𝗞𝗢𝗟𝗞𝗔𝗧𝗔 𝗞𝗡𝗜𝗚𝗛𝗧 𝗥𝗜𝗗𝗘𝗥𝗦! 💜#KKRvSRH | #Final | #TheFinalCall | @KKRiders pic.twitter.com/iEfmGOrHVp
— IndianPremierLeague (@IPL) May 26, 2024