Friday, September 20, 2024

IPL 2024: SRH ವಿರುದ್ದ KKRಗೆ ಭರ್ಜರಿ ಗೆಲುವು: ಕೊಲ್ಕತ್ತಾ ತಂಡಕ್ಕೆ ದೀದಿ ಅಭಿನಂದನೆ

ಬೆಂಗಳೂರು: 17ನೇ ಆವೃತ್ತಿಯ ಐಪಿಎಲ್‌ನಲ್ಲಿ ಚಾಂಪಿಯನ್‌ ಪಟ್ಟ ಮುಡಿಗೇರಿಸಿಕೊಂಡ ಕೋಲ್ಕತ್ತಾ ನೈಟ್‌ ರೈಡರ್ಸ್‌ ತಂಡಕ್ಕೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅಭಿನಂದನೆ ಸಲ್ಲಿಸಿದ್ದಾರೆ.

ಭಾನುವಾರ ಸಂಜೆ ಮುಕ್ತಾಯವಾದ IPL 2024ನೇ ಫೈನಲ್​ ಪಂದ್ಯದಲ್ಲಿ ಸನ್​ ರೈಸರ್ಸ್​ ಹೈದರಬಾದ್​ ತಂಡದ ವಿರುದ್ದ ಕೆಕೆಆರ್‌ ತಂಡ ಗೆಲುವು ಸಾಧಿಸುತ್ತಿದ್ದಂತೆ ತಂಡಕ್ಕೆ ಎಲ್ಲಡೆ ಅಭಿನಂದನೆಗಳ ಮಹಾಪೂರವೆ ಹರಿದು ಬಂದಿತ್ತು. ಇದೇ ಸಂದರ್ಭದಲ್ಲಿ ಕೊಲ್ಕತ್ತಾ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಮ್ಮ ಎಕ್ಸ್‌ ಖಾತೆ ಮೂಲಕ ವಿಜೇತ ತಂಡಕ್ಕೆ ತುಂಬು ಹೃದಯದ ಅಭಿನಂದನೆ ಸಲ್ಲಿಸಿದ್ದಾರೆ.

ಇದನ್ನೂ ಓದಿ:SRHಗೆ ಹೀನಾಯ ಸೋಲು : 10 ವರ್ಷಗಳ ಬಳಿಕ ಮತ್ತೆ ಚಾಂಪಿಯನ್‌ ಪಟ್ಟಕ್ಕೇರಿದ ಕೆಕೆಆರ್‌

ಈ ಪೋಸ್ಟ್​​ನಲ್ಲಿ, ಕೋಲ್ಕತ್ತಾ ನೈಟ್ ರೈಡರ್ಸ್ ಗೆಲುವು ಬಂಗಾಳದಾದ್ಯಂತ ಸಂಭ್ರಮ ತಂದಿದೆ. ಐಪಿಎಲ್‌ನ ಈ ಋತುವಿನಲ್ಲಿ ದಾಖಲೆಯ ಪ್ರದರ್ಶನ ನೀಡಿದ್ದಕ್ಕಾಗಿ ಆಟಗಾರರು, ಸಹಾಯಕ ಸಿಬ್ಬಂದಿ ಮತ್ತು ಫ್ರಾಂಚೈಸಿಗೆ ನಾನು ವೈಯಕ್ತಿಕವಾಗಿ ಅಭಿನಂದನೆ ಸಲ್ಲಿಸುತ್ತೇನೆ. ಮುಂಬರುವ ವರ್ಷಗಳಲ್ಲಿ ಇನ್ನಷ್ಟು ಇಂತಹ ಮೋಡಿಮಾಡುವ ಗೆಲುವು ಸಿಗಲೆಂದು ಹಾರೈಸುತ್ತೇನೆ ಎಂದು ತಮ್ಮ ಎಕ್ಸ್‌ ಖಾತೆಯಲ್ಲಿ ಶುಭ ಹಾರೈಸಿದ್ದಾರೆ.

RELATED ARTICLES

Related Articles

TRENDING ARTICLES