ದೆಹಲಿ: ಇದೇ ಮೊದಲ ಬಾರಿಗೆ ಅಮೇರಿಕಾ ಮತ್ತು ವೆಸ್ಟ್ ಇಂಡೀಸ್ ಆತಿಥ್ಯದಲ್ಲಿ ಟಿ-20 ವಿಶ್ವಕಪ್ ನಡೆಯಲಿದ್ದೂ ಈ ವಿಶ್ವಕಪ್ ಪಂದ್ಯಾವಳಿಯ ಮೇಲೆ ಉಗ್ರರ ಕರಿನೆರಳು ಬಿದ್ದಿದೆ. ಭಾರತ-ಪಾಕಿಸ್ತಾನ ನಡುವಿನ ಪಂದ್ಯಕ್ಕೆ ಉಗ್ರ ಸಂಘಟನೆಯಿಂದ ಬೆದರಿಕೆ ಕರೆ ಬಂದಿದೆ ಎಂದು ಅಮೆರಿಕದ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಐಸಿಸ್ ಉಗ್ರ ಸಂಘಟನೆಯೊಂದಿಗೆ ಗುರುತಿಸಿಕೊಂಡಿರುವ ಖೊರಾಸನ್ ಉಗ್ರ ಸಂಘಟನೆ ಭಾರತ-ಪಾಕಿಸ್ತಾನ ನಡುವಿನ ಪಂದ್ಯದ ದಿನ ದಾಳಿ ಮಾಡುವುದಾಗಿ ಬೆದರಿಕೆ ಹಾಕಿದೆ. ಈ ಬಗ್ಗೆ ವಿಡಿಯೊ ಹೇಳಿಕೆ ಪ್ರಸಾರವಾಗಿದೆ ಎಂದು ಪೊಲೀಸ್ ಅಧಿಕಾರಿ ಪ್ಯಾಟ್ರಿಕ್ ರೈಡರ್ ಹೇಳಿದ್ದಾರೆ.
ಇದನ್ನೂ ಓದಿ: ಪ್ರಜ್ವಲ್ ಬಂಧನಕ್ಕೆ ಆಗ್ರಹಿಸಿ ವಿವಿಧ ಸಂಘಟನೆಗಳಿಂದ ಹಾಸನದಲ್ಲಿ ಬೃಹತ್ ಪ್ರತಿಭಟನೆ
ಇದೇ ವೇಳೆ ನಗರದ ಗವರ್ನರ್ ಅವರು ಭದ್ರತಾ ವ್ಯವಸ್ಥೆಯನ್ನು ಪರಿಶೀಲನೆ ನಡೆಸಿ, ಬಿಗಿ ಬಂದೋಬಸ್ತ್ ಮಾಡುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ನ್ಯೂಯಾರ್ಕ್ನ ಐಸೆನೋವಾರ್ ಪಾರ್ಕ್ನಲ್ಲಿರುವ ಕ್ರಿಕೆಟ್ ಕ್ರೀಡಾಂಗಣದಲ್ಲಿ ಜೂನ್ 9ರಂದು ಪಂದ್ಯ ನಡೆಯಲಿದೆ.