Friday, September 20, 2024

Pendrive Case: ರೇವಣ್ಣ, ಭವಾನಿ, ಪ್ರಜ್ವಲ್​ ಜಾಮೀನು ಅರ್ಜಿ ವಿಚಾರಣೆ ಇಂದು

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್​ ರೇವಣ್ಣ ರಾಸಲೀಲೆಗಳ ಪ್ರಕರಣಕ್ಕೆ ಸಂಬಂಧಿಸಿ ಮತ್ತು ಸಂತ್ರಸ್ತೆಯ ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿ ಇಂದು ಶಾಸಕ ಹೆಚ್​.ಡಿ ರೇವಣ್ಣ ಸೇರಿದಂತೆ ಅವರ ಕುಟುಂಬದ ಮೂವರು ಸದಸ್ಯರ ಜಾಮೀನು ಅರ್ಜಿ ವಿಚಾರಣೆ ಅಗ್ನಿ ಪರೀಕ್ಷೆ ಇಂದು ನಡೆಯಲಿದೆ.

ಅಶ್ಲೀಲ ವಿಡಿಯೋ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಶುಕ್ರವಾರ ರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆರೆಸ್ಟ್ ಆಗಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರಿಗೆ ಜಾಮೀನೋ, ಜೈಲೋ ಎಂಬುದು ಇಂದು ನಿರ್ಧಾರವಾಗಲಿದೆ. ಜೊತೆಗೆ ಪ್ರಜ್ವಲ್​ ತಾಯಿ ಭವಾನಿ ರೇವಣ್ಣ ಅವರ ಜಾಮೀನು ಅರ್ಜಿಯೂ ಇಂದೇ ವಿಚಾರಣೆಗೆ ಬರಲಿದೆ. ಎಚ್‌ಡಿ ರೇವಣ್ಣ ಅವರು ತಮ್ಮ ಮೇಲಿನ ಎಫ್‌ಐಆರ್‌ ರದ್ದತಿಗೆ ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯೂ ಇಂದು ನಡೆಯಲಿದೆ.

ಇದನ್ನೂ ಓದಿ: ವಿದೇಶದಿಂದ ಬಂದ ಪ್ರಜ್ವಲ್​ನನ್ನ ಮಹಿಳಾ ಅಧಿಕಾರಿಗಳೇ ಬಂಧಿಸಿದ್ದೇಕೆ?

ಕೆ.ಆರ್‌.ನಗರ ತಾಲೂಕಿನ ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣದಲ್ಲಿ ಬಂಧನ ಭೀತಿಯಲ್ಲಿರುವ ಭವಾನಿ ರೇವಣ್ಣ, ಜಾಮೀನಿಗೆ ಅರ್ಜಿ ಸಲ್ಲಿಸಿದ್ದು, ಜನಪ್ರತಿನಿಧಿಗಳ ಕೋರ್ಟ್​ ನ್ಯಾಯಾದೀಶರು ಇಂದು ಜಾಮೀನು ಅರ್ಜಿ ತೀರ್ಪು ಪ್ರಕಟಿಸಲಿದ್ದಾರೆ. ಸಂತ್ರಸ್ತೆಯ ಅಪಹರಣದ ಆರೋಪದಲ್ಲಿ SIT ಪರ ವಕೀಲ ಹಾಗೂ ಭವಾನಿ ಪರ ವಕೀಲರ ವಾದವನ್ನು ಆಲಿಸಿದ್ದ ಕೋರ್ಟ್​ ಇಂದಿಗೆ ತೀರ್ಪು ಕಾಯ್ದಿರಿಸಿತ್ತು. ಇಂದು ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರಿಂದ ತೀರ್ಪು ಹೊರಬೀಳಲಿದೆ.

ಇನ್ನು ಎಫ್ಐಆರ್ ರದ್ದು ಕೋರಿ ರೇವಣ್ಣ ಸಲ್ಲಿಸಿರುವ ಅರ್ಜಿ ಸಹ ಇಂದು ವಿಚಾರಣೆ ನಡೆಯಲಿದೆ. ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣದಲ್ಲಿ ತಮ್ಮ ಮೇಲಿರುವ ದೂರನ್ನು ಕೈಬಿಡಲು ರೇವಣ್ಣ ಕೋರಿದ್ದಾರೆ. ಅಪಹರಣ ಪ್ರಕರಣದಲ್ಲೂ, ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲೂ ಮಾಜಿ ಸಚಿವ ಎಚ್‌ಡಿ ರೇವಣ್ಣ ಅವರಿಗೆ ಜಾಮೀನು ಮಂಜೂರಾಗಿದೆ. ಆದರೆ ಜನಪ್ರತಿನಿಧಿಗಳ ಕೋರ್ಟ್ ನೀಡಿರುವ ಜಾಮೀನು ಪ್ರಶ್ನಿಸಿ SIT ಹೈಕೋರ್ಟ್ ಮೆಟ್ಟಿಲೇರಿದ್ದು, ಈ ಆದೇಶವನ್ನು ಪ್ರಶ್ನೆ ಮಾಡಲಿದೆ.

RELATED ARTICLES

Related Articles

TRENDING ARTICLES