Sunday, October 6, 2024

ಬೆಂಗಳೂರಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ

ಬೆಂಗಳೂರು: ಇಂದು ಕೂಡ ರಾಜಧಾನಿ ಬೆಂಗಳೂರು ಸೇರಿದಂತೆ ಹಲವೆಡೆ ಗುಡುಗು, ಮಿಂಚು ಸಹಿತ ಭಾರಿ ಗಾಳಿಯೊಂದಿಗೆ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಬೆಂಗಳೂರು ನಗರ ಸೇರಿದಂತೆ ದಕ್ಷಿಣ ಕರ್ನಾಟಕದ ಬಹುತೇಕ ಭಾಗವನ್ನು ಮುಂಗಾರು ಆವರಿಸಿದೆ. ಇದರ ಪ್ರಭಾವದಿಂದಾಗಿ ಜೂನ್‌ 7ರ ವರೆಗೆ ಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಪ್ರಮುಖವಾಗಿ ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ ಹಾಗೂ ರಾಮನಗರ, ಶಿವಮೊಗ್ಗ, ವಿಜಯನಗರದಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ. ಕೆಲವೊಮ್ಮೆ ಗುಡುಗು, ಮಿಂಚು ಸಂಭವವಿದೆ. ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ವ್ಯಾಪಕ ಮಳೆಯಾಗಲಿದೆ.

ಇದನ್ನೂ ಓದಿ: ಮುಂಗಾರು ಆರಂಭದಲ್ಲೇ ಬೆಂಗಳೂರು ಅಸ್ತವ್ಯಸ್ತ: ವಾಹನ ಸವಾರರು ಹೈರಾಣು

ಮುಂದಿನ 3 ಗಂಟೆಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಮಿಂಚು, ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಸಂಭವವಿದ್ದು, ಗಾಳಿಯ ವೇಗ 30 ರಿಂದ 40 ಕಿ.ಮೀ ಇರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

RELATED ARTICLES

Related Articles

TRENDING ARTICLES