Friday, September 20, 2024

ರೇವ್​ ಪಾರ್ಟಿ ಪ್ರಕರಣ: ಸಿಸಿಬಿ ವಿಚಾರಣೆಗೆ ಹಾಜರಾದ ತೆಲುಗು ನಟಿ ಹೇಮ

ಬೆಂಗಳೂರು: ರೇವ್​ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಹೇಮಾ ಇಂದು ಬೆಂಗಳೂರಿನ ಸಿಸಿಬಿ ಕಚೇರಿಗೆ ವಿಚಾರಣೆಗಾಗಿ ಹಾಜರಾಗಿದ್ದಾರೆ. ಈ ಮೊದಲು ಹಾಜರಾಗುವಂತೆ ಅವರಿಗೆ ಮೊದಲ ನೋಟಿಸ್ ನೀಡಲಾಗಿತ್ತು. ಆದರೆ, ಅವರು ಅಂದು ಹಾಜರಾಗದೇ ಸಮಯಾವಕಾಶ ಕೇಳಿದ್ದರು.
ಹೇಮಾ ಹಾಜರಾಗದ ಹಿನ್ನೆಲೆಯಲ್ಲಿ 2ನೇ ನೋಟಿಸ್ ಕೂಡ ನೀಡಿದ್ದರು ಸಿಸಿಬಿ ಅಧಿಕಾರಿಗಳು. ಇಂದು ಸಂಜೆ 4 ಗಂಟೆಗೆ ಬೆಂಗಳೂರಿಗೆ ಆಗಮಿಸಿರುವ ಹೇಮಾ ಅಧಿಕಾರಿಗಳ ಮುಂದೆ ಹಾಜರಾಗಿದ್ದಾರೆ. ಹೇಮಾ ಅವರ ವಿಚಾರಣೆಯನ್ನು ಅಧಿಕಾರಿಗಳು ಸಿಸಿಬಿ ಕಚೇರಿಯಲ್ಲಿ ಮಾಡುತ್ತಿದ್ದಾರೆ.
ಮೊನ್ನೆಯಷ್ಟೇ ಡ್ರಗ್ಸ್ ಸೇವನೆಗೆ ಸಂಬಂಧಿಸಿದಂತೆ ಹೇಮಾ ರಿಪೋರ್ಟ್ ಪಾಸಿಟೀವ್ ಬಂದಿತ್ತು. ಆನಂತರ ಮೊದಲ ನೋಟಿಸ್  ನೀಡಲಾಗಿತ್ತು. ಅನಾರೋಗ್ಯದ ಕಾರಣಕೊಟ್ಟು  ಕಾಲಾವಕಾಶ ಕೇಳಿದ್ದರು ನಟಿ ಹೇಮಾ. ಆನಂತರ 2ನೇ ನೋಟಿಸ್ ನೀಡಲಾಗಿತ್ತು.  ಎರಡನೇ ನೋಟಿಸ್ ಗೆ ಸಿಸಿಬಿ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.
ಘಟನೆಯ ಹಿನ್ನೆಲೆ:
ಎಲೆಕ್ಟ್ರಾನಿಕ್ ಸಿಟಿ ಬಳಿಯ ಜಿ ಆರ್ ಫಾರ್ಮ್ ಹೌಸ್ ನಲ್ಲಿ ಮೇ19ರಂದು ಭಾನುವಾರ ಸಂಜೆ ಐದು ಘಂಟೆಯಿಂದ ಆರಂಭವಾಗಿದ್ದ ರೇವ್​ ಪಾರ್ಟಿ ಸೋಮವಾರ ಬೆಳಗಿನ ಜಾವದವರೆಗೂ ಮುಂದುವರಿದಿತ್ತು. ಪಾರ್ಟಿಯಲ್ಲಿ 110ಕ್ಕೂ ಹೆಚ್ಚು ಜನರು ಭಾಗಿಯಾಗಿದ್ದರು. ಐದು ಜನ ಈ ಇವೆಂಟ್ ಆರ್ಗನೈಸ್ ಮಾಡಿದ್ದರು ಎಂದು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ಫಾರ್ಮ್‌ಹೌಸ್‌ನಲ್ಲಿ ದಾಳಿ ನಡೆಸಿದ ಪೊಲೀಸರು 1.5 ಕೋಟಿ ಮೌಲ್ಯದ MDMA (Ecstacy) ಮಾತ್ರೆಗಳು, ಹೈಡ್ರೋ ಗಾಂಜಾ, ಕೊಕೇನ್, ಹೈ ಎಂಡ್ ಕಾರುಗಳು, DJ ಉಪಕರಣಗಳು, ಧ್ವನಿ ಮತ್ತು ಬೆಳಕು ಉಪಕರಣಗಳು ಸೇರಿದಂತೆ 1.5 ಕೋಟಿ ರೂ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದಿದ್ದರು.

RELATED ARTICLES

Related Articles

TRENDING ARTICLES