Friday, September 20, 2024

ರಾಜ್ಯದಲ್ಲಿ 7 ದಿನಗಳ ಕಾಲ ಭಾರಿ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದಲ್ಲಿ ಮುಂಗಾರು ಮಳೆ ಅಬ್ಬರ ಜೋರಾಗಿದ್ದು, ಮಳೆಯ ಅಬ್ಬರಕ್ಕೆ ನದಿಗಳು & ತೊರೆಗಳು, ಹಳ್ಳಗಳು ತುಂಬಿ ಹರಿಯುತ್ತಿವೆ. ಭಾರಿ ಮಳೆ ಕಾರಣಕ್ಕೆ ಈಗಾಗಲೇ ಅಗತ್ಯವಾದ ಕ್ರಮಗಳನ್ನ ಕೂಡ ಕೈಗೊಳ್ಳಲಾಗಿದೆ. ಇದೀಗ ಮುಂದಿನ 7 ದಿನ ಭಾರಿ ಮಳೆ ಬೀಳಲಿದೆ.

ಇದನ್ನೂ ಓದಿ: ಬೆಂಗಳೂರಿನ ಕೋರ್ಟ್‍ನಲ್ಲಿಂದು ರಾಹುಲ್​ ಗಾಂಧಿ ವಿಚಾರಣೆ

ಕರಾವಳಿ ಭಾಗದಲ್ಲಿ ಒಂದೆರಡು ಕಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕರ್ನಾಟಕ ಭಾಗದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆ ಉತ್ತರ ಕನ್ನಡ ಭಾಗದಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಸಿಲಿಕಾನ್ ಸಿಟಿಯಲ್ಲಿ ದಿನವಿಡೀ ಮೋಡ ಕವಿದ ವಾತಾವರಣ ಮುಂದುವರೆಯಲಿದ್ದು, ಸಂಜೆ ವೇಳೆ ಸಿಲಿಕಾನ್ ಸಿಟಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ರಾಜ್ಯದಲ್ಲಿ ತುಂತುರು ಮಳೆ, ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆ ಬೀಳಲಿದೆ. ಈ ಮೂಲಕ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಇದೀಗ ಹವಾಮಾನ ಇಲಾಖೆ ವರದಿಯಲ್ಲಿ ಹೇಳಿದೆ.

ಜೂನ್ 6 ರಿಂದ 8 ರವರೆಗೆ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಳೆ ಅಬ್ಬರಿಸಲಿದೆ. ಜೂನ್ 8 ರಿಂದ 12 ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಮತ್ತು ಮಲೆನಾಡು ಜಿಲ್ಲೆ ಪ್ರದೇಶಗಳಲ್ಲಿ ಕೂಡ ಮಳೆ ಅಬ್ಬರ ತೋರಿಸಲಿದೆ. ಹೀಗಾಗಿ ಹೈ ಅಲರ್ಟ್ ಘೋಷಿಸಿರುವ, ಹವಾಮಾನ ಇಲಾಖೆ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಲು ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES