Monday, October 7, 2024

 ಬಿಜೆಪಿ ವಿರುದ್ಧ 40% ಕಮಿಷನ್ ಜಾಹೀರಾತು ಪ್ರಕರಣ: ರಾಹುಲ್​ಗೆ ರಿಲೀಫ್​

ಬೆಂಗಳೂರು: ಕಾಂಗ್ರೆಸ್​ ಸಂಸದ ರಾಹುಲ್ ಗಾಂಧಿಗೆ ಇಂದು ಜಾಮೀನು ಮಂಜೂರಾಗಿದೆ. ಬಿಜೆಪಿ ವಿರುದ್ಧ 40% ಕಮೀಷನ್​ ಜಾಹೀರಾತು ಪ್ರಕರಣದಲ್ಲಿ ಶುಕ್ರವಾರ (ಜೂ.7) 42ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದ್ದು, ಜುಲೈ 30ಕ್ಕೆ ವಿಚಾರಣೆ ಮುಂದೂಡಿದೆ.

ಬಿಜೆಪಿ ಸಲ್ಲಿಸಿದ್ದ ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂ.1ರಂದು ವಿಚಾರಣೆ ನಡೆಸಿದ್ದ 42ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಜಾಮೀನು ಮಂಜೂರು ಮಾಡಿತ್ತು. ಅಲ್ಲದೇ ಗೈರಾಗಿದ್ದ ರಾಹುಲ್ ಗಾಂಧಿ ಅವರಿಗೆ ಜೂನ್ 7 ರಂದು ಕಡ್ಡಾಯವಾಗಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗಬೇಕೆಂದು ಆದೇಶಿಸಿತ್ತು. ಇಂದು ಕೋರ್ಟ್‌ಗೆ ಹಾಜರಾದ ಹಿನ್ನೆಲೆ ಜಾಮೀನು ಮಂಜೂರು ಮಾಡಿದೆ.
ಜೂನ್ 1ರಂದು ವಿಚಾರಣೆಯ ಸಂದರ್ಭದಲ್ಲಿ ರಾಹುಲ್ ಪರ ವಕೀಲರು ಐಎನ್‌ಡಿಐಎ ಮೈತ್ರಿಕೂಟದ ಸಭೆಯಲ್ಲಿ ಭಾಗಿಯಾಗಿದ್ದರಿಂದ ಹಾಜರಾತಿಯಿಂದ ವಿನಾಯಿತಿ ನೀಡುವಂತೆ ಕೋರಿದ್ದರು. ಆದರೆ ನ್ಯಾಯಾಲಯವು ಮನವಿ ನಿರಾಕರಿಸಿತ್ತು. ನಂತರ ಜೂನ್ 7 ರಂದು ಖುದ್ದು ಹಾಜರಾಗಬೇಕೆಂದು ಸೂಚಿಸಿತ್ತು.
ನ್ಯಾಯಾಲಯದ ಸೂಚನೆಯಂತೆ ಇಂದು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಹಾಜರಾದ ಸಂಸದ ರಾಹುಲ್​ ಗಾಂಧಿಗೆ ಜಾಮೀನು ಮಂಜೂರು ಮಾಡಿದ್ದು. ಜುಲೈ 30ಕ್ಕೆ ವಿಚಾರಣೆ ಮುಂದೂಡಿದೆ.

RELATED ARTICLES

Related Articles

TRENDING ARTICLES