ಬೆಂಗಳೂರು: ನಡು ರಸ್ತೆಯಲ್ಲಿ ಪಾನಮತ್ತ ಕಿಡಿಗೇಡಿಗಳು ಮಹಿಳೆ, ಯುವತಿ ಮೇಲೆ ಹಲ್ಲೆ ನಡೆಸಿ ಅಟ್ಟಹಾಸ ಮೆರೆದಿರುವ ಘಟನೆ ಬೆಂಗಳೂರಿನ ತಲಘಟ್ಟಪುರ ಠಾಣಾ ವ್ಯಾಪ್ತಿಯ ಆವಲಹಳ್ಳಿಯಲ್ಲಿ ನಡೆದಿದೆ.
ಮದ್ಯ ಸೇವಿಸಿ ಟೈಟ್ ಆಗಿದ್ದ ಬಾಲಾಜಿ, ಯೋಗಿ ಸೇರಿದಂತೆ ಮೂವರು ಪುಂಡರ ಗ್ಯಾಂಗ್ ನಡು ರಸ್ತೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಮಹಿಳೆ ಮತ್ತು ಯುವತಿಯನ್ನು ಎಳೆದಾಡಿ ಹಲ್ಲೆ ನಡೆಸಿದ್ದಾರೆ. ಸಾರ್ವಜನಿಕವಾಗಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾರೆ.
ಇದನ್ನೂ ಓದಿ: ರಾಜ್ಯದ ಹಲವೆಡೆ ರೆಡ್ ಅಲರ್ಟ್ ಘೋಷಸಿದ ಹವಾಮಾನ ಇಲಾಖೆ
ನೆರೆಹೊರೆಯವರ ಸಹಾಯದಿಂದ ಮಹಿಳೆ, ಯುವತಿ ಪಾರಾಗಿದ್ದು ಆರೋಪಿಗಳ ವಿರುದ್ದ ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಮಹಿಳೆ ಮತ್ತು 21 ವರ್ಷದ ಯುವತಿಯ ಕೂದಲು ಹಿಡಿದೆಳೆದು ಹಲ್ಲೆ ನಡೆಸಿರುವ ದೃಶ್ಯಗಳನ್ನು ಸ್ಥಳೀಯರು ಸೆರೆ ಹಿಡಿದಿದ್ದಾರೆ.