Sunday, October 6, 2024

ಕೊಲೆ ಪ್ರಕರಣದಲ್ಲಿ ನಟ ದರ್ಶನ ಬಂಧನ: ಗೃಹಸಚಿವ ಪರಮೇಶ್ವರ್ ಪ್ರತಿಕ್ರಿಯೆ

ಬೆಂಗಳೂರು: ಕೊಲೆ ಪ್ರಕರಣದಲ್ಲಿ ಸ್ಯಾಂಡಲ್​ವುಡ್​ ನಟ ದರ್ಶನ್​​ ಇಂದು ಮೈಸೂರಿನಲ್ಲಿ ಅರೆಸ್ಟ್ ಆಗಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.

ನಗರದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು, ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ದರ್ಶನ್‌ರನ್ನು ಬಂಧಿಸಲಾಗಿದೆ. ಬಂಧಿಸಿರುವ ಆರೋಪಿಗಳ ವಿಚಾರಣೆ ಮಾಡುವಾಗ ದರ್ಶನ್ ಹೆಸರು ಬಂದಿದೆ ಎಂಬ ಮಾಹಿತಿ ಇದೆ. ಇದರ ಮೇಲೆ ಇನ್ನಷ್ಟು ತನಿಖೆ ನಡೆಯಬೇಕಿದೆ. ಅಲ್ಲಿಯವರೆಗೂ ಇದರ ಏನು ಹೇಳೋಕೆ ಆಗಲ್ಲ ಎಂದರು.

ಈ ಕೇಸ್‌ನಲ್ಲಿ ಅವರು ನೇರವಾಗಿ ಭಾಗಿಯಾಗಿದ್ದಾರಾ ಇಲ್ವಾ? ಯಾವ ಕಾರಣಕ್ಕೆ ಕೊಲೆ ನಡೆದಿದೆ ಎಂದು ಇನ್ನೂ ತನಿಖೆ ಬಳಿಕ ತಿಳಿಯಬೇಕಿದೆ. ಈ ಸಂದರ್ಭದಲ್ಲಿ ಹೆಚ್ಚೇನು ಹೇಳಲು ಸಾಧ್ಯವಿಲ್ಲ ಎಂದಿದ್ದಾರೆ. ಸೋಶಿಯಲ್ ಮೀಡಿಯಾ ಕಾಮೆಂಟ್ ಬಗ್ಗೆ ಗೊತ್ತಿಲ್ಲ ಎಂದರು.

ಇದನ್ನೂ ಓದಿ: ಕೊಲೆ ಪ್ರಕರಣದಲ್ಲಿ ನಟ ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ಬಂಧನ!

ಅಂದಹಾಗೆ, ಚಿತ್ರದುರ್ಗದ ರೇಣುಕಾಸ್ವಾಮಿ ಅವರು ಪವಿತ್ರಾ ಗೌಡ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಪೋಸ್ಟ್ ಮಾಡಿದ್ದರು. ಈ ಪೋಸ್ಟ್ ಮಾಡಿದ ನಂತರ ರೇಣುಕಾಸ್ವಾಮಿರನ್ನು ಜೂನ್ 9ರಂದು ಹತ್ಯೆ ಮಾಡಲಾಗಿತ್ತು. ಕೊಲೆ ಮಾಡಿದ ಇಬ್ಬರು ಅರೋಪಿಗಳ ಜೊತೆ ದರ್ಶನ್ ನಿರಂತರ ಸಂಪರ್ಕದಲ್ಲಿದ್ದರು ಎಂಬ ಆರೋಪ ಕೇಳಿ ಬಂದಿದೆ.

ಪೊಲೀಸ್ ವಿಚಾರಣೆಯ ಸಂದರ್ಭದಲ್ಲಿ ಕೊಲೆ ಆರೋಪಿಗಳು ದರ್ಶನ್ ಸೂಚನೆಯಂತೆ ಕೊಲೆ ಮಾಡಿದ್ದೇವೆ. ಕೊಲೆಗೆ ದರ್ಶನ್ ಸುಪಾರಿ ನೀಡಿದ್ದರು ಎಂದು ಆರೋಪಿಗಳು ತಪ್ಪೊಪ್ಪಿಕೊಂಡ ಹಿನ್ನೆಲೆಯಲ್ಲಿ ದರ್ಶನ್ ಅವರನ್ನು ಬಂಧಿಸಲಾಗಿದೆ.

RELATED ARTICLES

Related Articles

TRENDING ARTICLES