ಬೆಂಗಳೂರು: ಬಿಜೆಪಿ ಹಿರಿಯ ಮುಖಂಡ ಹಾಗು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತೆ ಸಂಕಷ್ಟ ಎದುರಾಗಿದ್ದು POCSO ಪ್ರಕಣದಲ್ಲಿ ಬಿಎಸ್ವೈ ಬಂಧನಕ್ಕೆ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿ ನ್ಯಾಯಾಲಯ ಆದೇಶ ಮಾಡಿದೆ. ಯಾವುದೇ ಸಮಯದಲ್ಲೂ ಬಿಎಸ್ವೈ ಬಂಧನವಾಗಲಿದೆ.
ದಿಢೀರ್ ಬೆಳವಣಿಗೆಯಲ್ಲಿ ಯಡಿಯೂರಪ್ಪ ಅವರಿಗೆ ಸಿಐಡಿ ಪೊಲೀಸರು ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ್ದರು. ಇದಕ್ಕೆ ಸಂಬಂಧಿಸಿ 1ನೇ ತ್ವರಿತಗತಿಯ ನ್ಯಾಯಾಲಯವು ಆದೇಶ ಹೊರಡಿಸಿದೆ.
ಇದನ್ನೂ ಓದಿ: ಬಿಎಸ್ವೈ ಸೇರಿ 53 ಮಂದಿ ವಿರುದ್ಧ ದೂರು!: ಇದು ರಾಜಕೀಯ ಪ್ರೇರಿತವೇ?
81 ವರ್ಷದ ಬಿ.ಎಸ್ ಯಡಿಯೂರಪ್ಪ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ ಮಹಿಳೆ ಇತ್ತೀಚೆಗೆ ಬೆಂಗಳೂರಿನಲ್ಲಿ ಮೃತಪಟ್ಟಿದ್ದಾರೆ. ಶ್ವಾಸಕೋಶದ ಕ್ಯಾನ್ಸರ್ನಿಂದ ಬಳಲುತ್ತಿದ್ದ ಈ ಮಹಿಳೆ ಬೆಂಗಳೂರಿನ ಹುಳಿಮಾವಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.
ಯಡಿಯೂರಪ್ಪ ಅಷ್ಟೇ ಅಲ್ಲದೇ ಈ ಹಿಂದೆ ಹಿರಿಯ ರಾಜಕಾರಣಿ ಹಾಗೂ IPS ಅಧಿಕಾರಿ ಸೇರಿ 53 ಮಂದಿ ವಿರುದ್ಧ ಸಂತ್ರಸ್ತೆ ತಾಯಿ ದೂರು ನೀಡಿದ್ದರು. ಇಲ್ಲಿಗೆ ಈ ಪ್ರಕರಣ ಕ್ಲೋಸ್ ಎಂದೇ ಎಲ್ಲರೂ ಭಾವಿಸಿದ್ದರು. ಆದರೆ, ಇದೀಗ ಅವರ ಬಂಧನಕ್ಕೆ ಸಿದ್ದತೆ ನಡೆದಿದೆ ಎನ್ನಲಾಗುತ್ತಿದೆ.