Friday, September 20, 2024

ನಾಳೆಯಿಂದ SSLC ಪರೀಕ್ಷೆ-2: ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿ

ಬೆಂಗಳೂರು: 2024 ರ SSLC ಪರೀಕ್ಷೆ-2 ಜೂನ್ 14 ರಿಂದ ಜೂನ್ 22 ರವರೆಗೆ ನಡೆಯಲಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿ ಒಟ್ಟು 11 ಪರೀಕ್ಷೆ ಕೇಂದ್ರಗಳನ್ನು ತೆರೆಯಲಾಗಿದೆ.

ಜಿಲ್ಲೆಯ ದೇವನಹಳ್ಳಿ ತಾಲೂಕು 02, ದೊಡ್ಡಬಳ್ಳಾಪುರ ತಾಲೂಕು 03, ಹೊಸಕೋಟೆ ತಾಲೂಕು 03 ಹಾಗೂ ನೆಲಮಂಗಲ ತಾಲೂಕು 03 ಕೇಂದ್ರಗಳನ್ನು ಒಳಗೊಂಡಿರುತ್ತದೆ. ಜಿಲ್ಲೆಯಲ್ಲಿ ಒಟ್ಟು 2348 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಣಿಯಾಗಿದ್ದಾರೆ. ಈ ವಿದ್ಯಾರ್ಥಿಗಳಲ್ಲಿ ಪರೀಕ್ಷೆ ಒಂದರ ಅನುತ್ತೀರ್ಣ ವಿದ್ಯಾರ್ಥಿಗಳು 2082, ಫಲಿತಾಂಶ ಉತ್ತಮ ಪಡಿಸಿಕೊಳ್ಳಲು ಇಚ್ಚಿಸಿರುವ ವಿದ್ಯಾರ್ಥಿಗಳು 190 ಹಾಗೂ 76 ಖಾಸಗಿ ವಿದ್ಯಾರ್ಥಿಗಳು ನೋಂದಣಿ ಆಗಿರುತ್ತಾರೆ.

ಇದನ್ನೂ ಓದಿ: POCSO ಪ್ರಕರಣ: ಯಡಿಯೂರಪ್ಪ ಬಂಧನಕ್ಕೆ ವಾರೆಂಟ್​ ಜಾರಿ ಮಾಡಿದ ಕೋರ್ಟ್​

ಪರೀಕ್ಷೆಗಳನ್ನು ಯಾವುದೇ ಅಡೆತಡೆ ಇಲ್ಲದೆ ನಡೆಸುವ ಸಲುವಾಗಿ ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದ್ದು ಪರೀಕ್ಷಾ ಕೇಂದ್ರಗಳಿಗೆ ನಿಯೋಜಿತ ಸಿಬ್ಬಂದಿ ಹಾಗೂ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಅನ್ಯ ವ್ಯಕ್ತಿಗಳು ಹಾಗೂ ಸಾರ್ವಜನಿಕರಿಗೆ ಪ್ರವೇಶ ನಿರ್ಭಂಧಿಸಿದೆ.

ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿರುವ ಜೆರಾಕ್ಸ್ ಅಂಗಡಿ ಹಾಗು ಸೈಬರ್ ಸೆಂಟರ್ ಗಳನ್ನು ಮುಚ್ಚಲು ಸೂಚಿಸಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಅಳವಡಿಸಿರುವ ಸಿಸಿ ಕ್ಯಾಮೆರಾಗಳನ್ನು ನಿಯಮಬಾಹಿರವಾಗಿ ಹಾಳು ಮಾಡುವ ಯಾರೆ ವ್ಯಕ್ತಿಗಳ ವಿರುದ್ಧ ನಿರ್ಧಾಕ್ಷಿಣ್ಯವಾಗಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES