ಮೈಸೂರು: ಅನುಮಾನವೆಂಬ ಭೂತಕ್ಕೆ ಗರ್ಭಿಣಿ ನೇಣಿಗೆ ಶರಣಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ಸೌಮ್ಯಶ್ರೀ (27) ಮೃತ ದುರ್ದೈವಿ, ಮೈಸೂರಿನ ಮಾನಸಿ ನಗರ ಬಿಎಸ್ಎನ್ಎಲ್ ಲೇಔಟ್ನ ಮನೆಯೊಂದರಲ್ಲಿ ಈ ಘಟನೆ ನಡೆದಿದೆ.
ಇದನ್ನೂ ಓದಿ: POCSO ಪ್ರಕರಣ: ಯಡಿಯೂರಪ್ಪ ಬಂಧನಕ್ಕೆ ವಾರೆಂಟ್ ಜಾರಿ ಮಾಡಿದ ಕೋರ್ಟ್
ಕಳೆದ ಆರು ತಿಂಗಳ ಹಿಂದೆ ಬೆಂಗಳೂರು ಮೂಲದ ಶ್ರೀಧರ್ ಎಂಬುವವರ ತಮ್ಮ ಮಗಳು ಸೌಮ್ಯಶ್ರೀಯನ್ನು ಮೈಸೂರಿನ ಮಂಜುನಾಥ್ ಎಂಬುವವರ ಜೊತೆಗೆ ಮದುವೆ ಮಾಡಿಕೊಟ್ಟಿದ್ದರು. ಮದುವೆಯಾದಗಿನಿಂದ ಸೌಮ್ಯಳ ನಡತೆಯ ಮೇಲೆ ಪತಿ ಮಂಜುನಾಥ್ ಅನುಮಾನ ಪಡುತ್ತಿದ್ದ, ಹೀಗಾಗಿ ಮಂಜುನಾಥ್ ಹಾಗೂ ಮನೆಯವರೆಲ್ಲ ಸೇರಿ ಸೌಮ್ಯಳನ್ನ ಕೊಲೆ ಮಾಡಿದ್ದಾರೆ ಎಂದು ಮೃತ ಸೌಮ್ಯಳ ಪೋಷಕರು ಆರೋಪ ಮಾಡಿದ್ದಾರೆ.
ಘಟನೆ ಸಂಬಂಧ ಮೈಸೂರಿನ ಸೌತ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿಚಾರಣೆ ನಡೆಯುತ್ತಿದೆ.