Thursday, September 19, 2024

ಟೀಂ ಇಂಡಿಯಾ ಮಾಜಿ ಕ್ರಿಕೇಟಿಗ ಡೇವಿಡ್​ ಜಾನ್ಸನ್​ ಆತ್ಮಹತ್ಯೆ

ಬೆಂಗಳೂರು: ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಡೇವಿಡ್ ಜಾನ್ಸನ್​(52) ಆತ್ಮಹತ್ಯೆ ಶರಣಾಗಿದ್ದಾರೆ. ಇಂದು (ಜೂನ್ 20) ಬೆಂಗಳೂರಿನ ಕೊತ್ತನೂರು ಬಳಿ ಇರುವ ಅಪಾರ್ಟ್​ಮೆಂಟ್​ ಮೇಲಿಂದ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಇದನ್ನೂ ಓದಿ: ನಟ ದರ್ಶನ್​ ಅಭಿಮಾನಿಗಳಿಂದ ಒಳ್ಳೆ ಹುಡುಗ ಪ್ರಥಮ್​ಗೆ ಜೀವಬೆದರಿಕೆ ಕರೆ: ದೂರು ದಾಖಲು

ಡೇವಿಡ್ ಜಾನ್ಸನ್ ಅವರು ಅನಾರೋಗ್ಯದಿಂದಾಗಿ ಖಿನ್ನತೆಗೊಳಗಾಗಿದ್ದರು. ಈ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

1996ರಲ್ಲಿ ಭಾರತ ಟೆಸ್ಟ್ ತಂಡಕ್ಕೆ ಪಾದಾರ್ಪಣೆ ಮಾಡಿದ್ದ ಡೇವಿಡ್ ಜಾನ್ಸನ್, ಆಸ್ಟ್ರೇಲಿಯಾ ತಂಡವು ಭಾರತ ಪ್ರವಾಸ ಮಾಡಿದ್ದಾಗ ಟೀಂ ಇಂಡಿಯಾ ಪರ ಕಣಕ್ಕಿಳಿದಿದ್ದರು. ಆ ಸರಣಿಯಲ್ಲಿ ಡೇವಿಡ್ ಜಾನ್ಸನ್ ಗಂಟೆಗೆ 157.8 ಕಿಲೋ ಮೀಟರ್ ವೇಗದಲ್ಲಿ ಬೌಲಿಂಗ್ ಮಾಡಿ ಆಸ್ಟ್ರೇಲಿಯಾದ ಮೈಕಲ್ ಸ್ಲೇಟರ್ ಅವರನ್ನು ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದರು.

ಇನ್ನು ಡೇವಿಡ್ ಜಾನ್ಸನ್‌ ಒಟ್ಟು 39 ಪ್ರಥಮ ದರ್ಜೆ ಕ್ರಿಕೆಟ್ ಪಂದ್ಯಗಳನ್ನಾಡಿ ಒಟ್ಟು 125 ವಿಕೆಟ್ ಕಬಳಿಸಿ ಮಿಂಚಿದ್ದರು. ಇನ್ನು ಕೆಳಕ್ರಮಾಂಕದಲ್ಲಿ ಬ್ಯಾಟರ್ ಆಗಿದ್ದ ಜಾನ್ಸನ್ 437 ರನ್ ಪೇರಿಸಿದ್ದರು.

RELATED ARTICLES

Related Articles

TRENDING ARTICLES