ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಆ್ಯಂಡ್ ಗ್ಯಾಂಗ್ಗೆ ಮತ್ತೆ ಸಂಕಷ್ಟ ಎದುರಾಗಿದೆ. ಗುರುವಾರ ಪೊಲೀಸ್ ಕಸ್ಟಡಿ ಅವಧಿ ಮುಗಿದ ಕಾರಣ ಎ1 ಆರೋಪಿ ಪವಿತ್ರಾ ಗೌಡ, ಎ2 ದರ್ಶನ್ ಸೇರಿ 13 ಆರೋಪಿಗಳನ್ನು ಗುರುವಾರ 24ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನ್ಯಾಯಾಲಯವು ಎ 1 ಪವಿತ್ರಾ ಗೌಡ ಸೇರಿ ಏಳು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ವಹಿಸಿದೆ.
ಪ್ರಕರಣದ ತನಿಖೆಯೂ ಬೇರೆ ಬೇರೆ ಆಯಾಮಗಳಿಂದ ನಡೆಯುತ್ತಿದ್ದೂ ಡಿಗ್ಯಾಂಗ್ ನ ಕ್ರೂರತೆ ಮತ್ತಷ್ಟು ಬಯಲಿಗೆ ಬರುತ್ತಿರುವ ಹಿನ್ನೆಲೆ ದರ್ಶನ್ ಸೇರಿ ಆರು ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡಬೇಕು ಎಂದು, ಪವಿತ್ರಾ ಗೌಡ ಸೇರಿ 7 ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಬೇಕು ಎಂಬುದಾಗಿ ಪೊಲೀಸರು ಎರಡು ಪ್ರತ್ಯೇಕ ರಿಮ್ಯಾಂಡ್ ಅಪ್ಲಿಕೇಷನ್ ಸಲ್ಲಿಸಿದ್ದರು.
ಇದನ್ನೂ ಓದಿ: ನಟ ದರ್ಶನ್ ಅಭಿಮಾನಿಗಳಿಂದ ಒಳ್ಳೆ ಹುಡುಗ ಪ್ರಥಮ್ಗೆ ಜೀವಬೆದರಿಕೆ ಕರೆ: ದೂರು ದಾಖಲು
ಅದರಂತೆ ಎಸ್ಪಿಪಿ ಪ್ರಸನ್ನಕುಮಾರ್ ಅವರು ವಾದ ಮಂಡಿಸಿದರು. ಕೊನೆಗೆ ನ್ಯಾಯಾಲಯವು ಎಸ್ಪಿಪಿ ಅವರ ವಾದವನ್ನು ಪುರಸ್ಕರಿಸಿ ದರ್ಶನ್, ವಿನಯ್, ಪ್ರದೋಶ್, ನಾಗರಾಜ್, ಲಕ್ಷ್ಮಣ್, ಧನರಾಜ್ ಅವರ ಪೊಲೀಸ್ ಕಸ್ಟಡಿಯನ್ನು ಮುಂದುವರಿಸಿದರು. ಪವಿತ್ರಾ ಗೌಡ ಸೇರಿ 7 ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದ್ದು, ಇವರನ್ನು ಇಂದೇ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ಮಾಡಲಾಗುತ್ತದೆ.