Sunday, September 29, 2024

ಕಸ್ಟಡಿ ಬಳಿಕ ಜಾಮೀನು ಅರ್ಜಿ ಸಲ್ಲಿಕೆ ಮಾಡುತ್ತೇವೆ: ದರ್ಶನ್​ ಪರ ವಕೀಲ ರಂಗನಾಥ್​

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಪರ ವಕೀಲ ರಂಗನಾಥ್ ಹೇಳಿಕೆ ನೀಡಿದ್ದಾರೆ.

ಮಾದ್ಯಮದವರೊಂದಿಗೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಪೊಲೀಸರು ಪ್ರತ್ಯಕ್ಷ ಸಾಕ್ಷಿ ಇದೆ ಎಂದು ವಾದ ಮಂಡಿಸಿದ್ದಾರೆ. ಇಷ್ಟೂ ದಿನ ಇಲ್ಲದ ಪ್ರತ್ಯಕ್ಷ ಸಾಕ್ಷಿ ಇಂದು ಮಂಡಿಸಿದ್ದಾರೆ. ಪ್ರತ್ಯಕ್ಷ ಸಾಕ್ಷಿ ಇದೆ ಎನ್ನುವ ಕಾರಣ ಕೊಟ್ಟು ಕಸ್ಟಡಿಗೆ ಪಡೆದಿದ್ದಾರೆ. 30 ಲಕ್ಷ ಹಣ ರಿಕವರಿ ಮಾಡಿರೋ ಕಾರಣ ಕೊಟ್ಟು ಕಸ್ಟಡಿಗೆ ಕೇಳಿದ್ದಾರೆ.

ಪ್ರವೀಣ್ ಬುರ್ಖಾ vs ಹೈ ಕೋರ್ಟ್ ಅಫ್ ಡೆಲ್ಲಿ ಕೇಸ್ ಉಲ್ಲೇಖ ಮಾಡಿ ನಾವು ವಾದ ಮಾಡಿದ್ವಿ. ಈಗ ಹೊಸದಾಗಿ ಉಲ್ಲೇಖ ಮಾಡಿರುವ ಪ್ರತ್ಯಕ್ಷ ಸಾಕ್ಷಿಗಳ ಬಗ್ಗೆ ಹೆಚ್ಚಿನ ಮಾಹಿತಿ ಬೇಕಿದೆ. ಈ ಎರಡು ದಿನಗಳ ಕಸ್ಟಡಿ ಮುಗಿದ ಬಳಿಕ ಜಾಮೀನು ಅರ್ಜಿ ಸಲ್ಲಿಕೆ ಮಾಡುತ್ತೇವೆ ಎಂದು ದರ್ಶನ್ ಪರ ವಕೀಲ ರಂಗನಾಥ್ ಹೇಳಿದ್ದಾರೆ.

ಇದನ್ನೂ ಓದಿ: ಪೊಲೀಸ್​ ಪೇದೆ ಮೇಲೆ ಅವಾಚ್ಯ ಶಬ್ದಗಳಿಂದ ನಿಂದಿಸಿ ದರ್ಶನ್​ ಗ್ಯಾಂಗ್​ ಹಲ್ಲೆ

3ನೇ ಬಾರಿಗೆ ಪೊಲೀಸ್‌ ಕಸ್ಟಡಿಗೆ ನಟ ದರ್ಶನ್:

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್‌ ಸೇರಿದಂತೆ 4 ಆರೋಪಿಗಳನ್ನು ಕೋರ್ಟ್‌ ಮೂರನೇ ಬಾರಿಗೆ ಪೊಲೀಸ್‌ ಕಸ್ಟಡಿಗೆ ಒಪ್ಪಿಸಿದ್ದಾರೆ. ಇಂದು ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಪೊಲೀಸರು ದರ್ಶನ್‌ ಮತ್ತು ಗ್ಯಾಂಗ್‌ ಸದಸ್ಯರು ಎಸಿಎಂಎಂ ಕೋರ್ಟ್‌ಗೆ ಹಾಜರು ಪಡಿಸಿದರು. ಹತ್ಯೆ ಪ್ರಕರಣದಲ್ಲಿ ಸ್ಥಳ ಮಹಜರು, ಸಾಕ್ಷ್ಯ ಸಂಗ್ರಹ ಪ್ರಕ್ರಿಯೆಗಳು ಈ ವಾರ ಮತ್ತು ಕಳೆದ ವಾರ ನಡೆದಿತ್ತು.

ದರ್ಶನ್‌ ಸೇರಿ 4 ಆರೋಪಿಗಳಿಗೆ 2 ದಿನ ಪೊಲೀಸ್‌ ಕಸ್ಟಡಿಗೆ:

ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ದರ್ಶನ್‌ ಸೇರಿ 4 ಆರೋಪಿಗಳನ್ನು 2 ದಿನ ಪೊಲೀಸ್‌ ಕಸ್ಟಡಿಗೆ ನೀಡಿದೆ.. ದರ್ಶನ್‌, ವಿನಯ್, ಪ್ರದೋಶ್‌, ನಾಗರಾಜ್‌, ಲಕ್ಷ್ಮಣ್‌ ಹಾಗೂ ಧನರಾಜ್‌ ಅವರುಗಳನ್ನು ಮತ್ತೆ ಪೊಲೀಸ್ ಕಸ್ಟಡಿಗೆ ನೀಡಬೇಕೆಂದು ಮನವಿ ಮಾಡಿ ಪೊಲೀಸರು ರಿಮ್ಯಾಂಡ್ ಅರ್ಜಿ ಸಲ್ಲಿಸಿದ್ದರು.

ಎ1 ಪವಿತ್ರಾಗೆ ನ್ಯಾಯಾಂಗ ಬಂಧನ:

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪವಿತ್ರಾ ಗೌಡರನ್ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಹತ್ಯೆ ಪ್ರಕರಣದಲ್ಲಿ ದರ್ಶನ್‌ ಆ್ಯಂಡ್‌ಗೆ ಗ್ಯಾಂಗ್‌ಗೆ ಮತ್ತೆ ಸಂಕಷ್ಟ ಎದುರಾಗಿದೆ. ಇಂದು ಪೊಲೀಸ್‌ ಕಸ್ಟಡಿ ಅವಧಿ ಮುಗಿದ ಕಾರಣ ಎ1 ಆರೋಪಿ ಪವಿತ್ರಾ ಗೌಡ 24ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಪವಿತ್ರಾ ಗೌಡ ಸೇರಿದಂತೆ 9 ಮಂದಿ ಆರೋಪಿಗಳನ್ನ ಪರಪ್ಪನ ಅಗ್ರಹಾರಕ್ಕೆ ಕಳುಹಿಸಲಾಗಿದೆ.

RELATED ARTICLES

Related Articles

TRENDING ARTICLES