Saturday, September 28, 2024

18ನೇ ಸಂಸತ್ ಅಧಿವೇಶನ: ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕಾರ ಮಾಡಿದ ಸಚಿವರು

ನವದೆಹಲಿ: ಇಂದಿನಿಂದ 18ನೇ ಲೋಕಸಭೆಯ ಮೊದಲ ಅಧಿವೇಶನ ಆರಂಭವಾಗಿದ್ದು, ಅಧಿವೇಶನಕ್ಕೂ ಮುನ್ನ ನೂತನ ಚುನಾಯಿತ ಸದಸ್ಯರ ಪ್ರಮಾಣ ವಚನ ಸ್ವೀಕಾರ ನಡೆಯಿತು. ಈ ವೇಳೆ ರಾಜ್ಯದ ನಾಲ್ಕು ಮಂದಿ ಸಚಿವರು ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿದ್ದು ವಿಶೇಷ.

ಇಂದು ವಿಶೇಷ ಸಂಸತ್ ಅಧಿವೇಶನದ ಮೊದಲ ದಿನ ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಮಂತ್ರಿ ಮಂಡಲ ಸೇರಿದಂತೆ ಹೊಸದಾಗಿ ಚುನಾಯಿತರಾದ 280 ಸಂಸದರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಉಳಿದ 264 ಸಂಸದರು ನಾಳೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಜೂನ್ 26 ರಂದು ಲೋಕಸಭಾ ಸ್ಪೀಕರ್ ಆಯ್ಕೆ ಮತ್ತು ಜೂನ್ 27 ರಂದು ಉಭಯ ಸದನಗಳ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಭಾಷಣ ಮಾಡಲಿದ್ದಾರೆ.

ಕನ್ನಡದಲ್ಲೇ ಪ್ರಮಾಣ ವಚನ ಮಾಡಿದ ಸಚಿವರು :

ಕರ್ನಾಟಕದಿಂದ ಈ ಬಾರಿ ನಾಲ್ಕು ಸದಸ್ಯರಿಗೆ ಮೋದಿ ಸಂಪುಟದಲ್ಲಿ ಸಚಿವ ಸ್ಥಾನ ಮತ್ತು ರಾಜ್ಯ ಖಾತೆ ಸಚಿವ ಸ್ಥಾನ ಸಿಕ್ಕಿದ್ದು, 18ನೇ ಲೋಕಸಭೆಯ ಸದಸ್ಯನಾಗಿ, ಮಂಡ್ಯ ಮಹಾಜನತೆಯ ಪ್ರತಿನಿಧಿಯಾಗಿ ಹಂಗಾಮಿ ಸಭಾಧ್ಯಕ್ಷರಾದ ಶ್ರೀ ಭರ್ತೃಹರಿ ಮಹತಾಬ್‌ ಅವರ ಸಮ್ಮುಖದಲ್ಲಿ ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್​.ಡಿ ಕುಮಾರಸ್ವಾಮಿಯವರು ಮಾತೃಭಾಷೆಯಾದ ಕನ್ನಡಲ್ಲಿ ಪ್ರಮಾಣ ಸ್ವೀಕರಿಸಿದರು.

ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಹೊಸ ಮತ್ತು ನವೀಕರಿಸಬಹುದಾದ ಇಂಧನ ಖಾತೆ ಸಚಿವ ಪ್ರಹ್ಲಾದ್​ ಜೋಶಿಯವರು ಮೋದಿ ಸರ್ಕಾರದಲ್ಲಿ ಸತತ ಎರಡನೇ ಬಾರಿ ಕ್ಯಾಬಿನೆಟ್ ದರ್ಜೆ ಸಚಿವರಾಗಿ ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿದರು. ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಸತತ 5ನೇ ಬಾರಿ ಐತಿಹಾಸಿಕ ಗೆಲುವು ಸಾಧಿಸಿರುವ ಪ್ರಲ್ಹಾದ ಜೋಶಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಹೊಸ ಹೊಣೆಗಾರಿಕೆ ನೀಡಿದ್ದಾರೆ.

ಇದೇ ವೇಳೆ ಜಲಶಕ್ತಿ ಮತ್ತು ರೈಲ್ವೆ ಇಲಾಖೆಯ ರಾಜ್ಯ ಸಚಿವರಾಗಿ ವಿ.ಸೋಮಣ್ಣ ಅವರು, 18ನೇ ಲೋಕಸಭೆಯ ಮೊದಲ ಅಧಿವೇಶನದಲ್ಲಿ ಕನ್ನಡದಲ್ಲೇ ಪ್ರಮಾಣವಚನ ಸ್ವೀಕಾರ ಮಾಡಿದರು.

ಬೆಂಗಳೂರು ಉತ್ತರ ಕ್ಷೇತ್ರದಿಂದ ಚುನಾಯಿತರಾದ ಶೋಭಾ ಕರಂದ್ಲಾಜೆ ಅವರು ಇಂದು 18 ಲೋಕಸಭೆಯ ಮೊದಲ ಅಧಿವೇಶನದಲ್ಲಿ ಸಂಸತ್​ನ ಸದಸ್ಯರಾಗಿ ಕನ್ನಡದಲ್ಲೇ ಪ್ರಮಾಣವಚನವನ್ನು ಸ್ವೀಕಾರ ಮಾಡಿದರು.

ರಾಷ್ಟ್ರಪತಿಗಳ ಭಾಷಣದ ಬಳಿಕ ಸದನದಲ್ಲಿ ಗದ್ದಲ-ಕೋಲಾಹಲ:

ಜೂನ್ 28 ರಂದು ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯ ಚರ್ಚೆಯು ಸದನದಲ್ಲಿ ಭಾರೀ ಗದ್ದಲ-ಕೋಲಾಹಲಕ್ಕೆ ಕಾರಣವಾಗಬಹುದು. NEET-UG ಮತ್ತು UGC-NET ಪರೀಕ್ಷೆಗಳು, ಹೊಸ ಕ್ರಿಮಿನಲ್ ಕಾನೂನುಗಳು ಮತ್ತು ಕಾಂಚನಜುಂಗಾ ಎಕ್ಸ್‌ಪ್ರೆಸ್ ಅಪಘಾತ ಸೇರಿದಂತೆ ವಿವಿಧ ವಿಷಯಗಳ ಕುರಿತು ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಪ್ರತಿಪಕ್ಷಗಳು ಮುಂದಾಗಿವೆ. ಸಿದ್ಧತೆ ಮಾಡಿಕೊಂಡಿವೆ.

RELATED ARTICLES

Related Articles

TRENDING ARTICLES