Saturday, September 28, 2024

ರೇವಣ್ಣ ಪುತ್ರರ ಅರ್ಜಿ ವಿಚಾರಣೆ: ಪ್ರಜ್ವಲ್​ ನ್ಯಾಯಾಂಗ ಬಂಧನಕ್ಕೆ, ಸೂರಜ್​ ಸಿಐಡಿ ಕಸ್ಟಡಿಗೆ

ಬೆಂಗಳೂರು: ಮಾಜಿ ಸಚಿವ ಹೆಚ್​.ಡಿ ರೇವಣ್ಣ ಪುತ್ರರಿಬ್ಬರ ಪ್ರತ್ಯೇಕ ಪ್ರಕರಣಗಳ ಅರ್ಜಿ ವಿಚಾರಣೆಯೂ ಇಂದು ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್​ನಲ್ಲಿ ನಡೆಯಿತು.

ಸಲಿಂಗ ಕಾಮ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಜೆಡಿಎಸ್​ ವಿಧಾನಪರಿಷತ್ ಸದಸ್ಯ ಸೂರಜ್‌ ರೇವಣ್ಣನನ್ನು ನ್ಯಾಯಾಲಯವು​, 8 ದಿನ ಸಿಐಡಿ ಕಸ್ಟಡಿಗೆ ನೀಡಿದೆ. ಇನ್ನು ಅತ್ಯಾಚಾರ ಪ್ರಕರಣದ ಆರೋಪಿಯಾಗಿರುವ ಪ್ರಜ್ವಲ್​ ರೇವಣ್ಣಗೆ ಸಿಐಡಿ ಕಸ್ಟಡಿಯಿಂದ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಇದನ್ನೂ ಓದಿ: ದರ್ಶನ್, ಭವಾನಿ, ಪ್ರಜ್ವಲ್, ಸೂರಜ್ ಫೋಟೋ ವೈರಲ್

ಎರಡು ಪ್ರಕರಣಗಳ ಪ್ರತ್ಯೇಕವಾಗಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶ ಕೆ.ಎನ್‌.ಶಿವಕುಮಾರ್‌ ಅವರು ಸೂರಜ್‌ನನ್ನು ಜುಲೈ 1ರವರೆಗೆ ಸಿಐಡಿ ಕಸ್ಟಡಿಗೆ ನೀಡಿ ಆದೇಶ ನೀಡಿದ್ದರೆ, ಪ್ರಜ್ವಲ್​ಗೆ ಜುಲೈ 8ರ ವರೆಗೆ ನ್ಯಾಯಾಂಗ ಬಂಧನ ನೀಡಿ ಆದೇಶ ಹೊರಡಿಸಿದರು.

ಇನ್ನು, ಮತ್ತೊಂದೆಡೆ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಕೋರ್ಟ್​, ಆದೇಶ ಕಾಯ್ದಿರಿಸಿದೆ. ಜೂನ್ 26ಕ್ಕೆ ಜಾಮೀನು ಅರ್ಜಿ ಸಂಬಂಧ ಆದೇಶ ನೀಡುವ ಸಾಧ್ಯತೆ ಇದೆ. ಹೀಗಾಗಿ ಪ್ರಜ್ವಲ್​ ರೇವಣ್ಣಗೆ ಜಾಮೀನು ಸಿಗುತ್ತಾ? ಅಥವಾ ಜೈಲೇ ಗತಿನಾ ಎನ್ನುವುದನ್ನು ಕಾದುನೋಡಬೇಕಿದೆ.

RELATED ARTICLES

Related Articles

TRENDING ARTICLES